ಬಳ್ಳಾರಿ: ಶಾಸಕ ಜಿ.ಜನಾರ್ದನರೆಡ್ಡಿ ಒಬ್ಬ ಜುಜುಬಿ ರಾಜಕಾರಣಿ, ಎಷ್ಟು ವರ್ಷ ಜೈಲಿಗೆ ಹೋಗಿ ಬಂದಿದೀರಿ. ನಿಮ್ಮ ಅಟ್ಟಹಾಸ ಮುರಿದದ್ದು, ಬಳ್ಳಾರಿ ಜಿಲ್ಲೆಯ ಮಹಾ ಜನತೆಯ ಭಯಮುಕ್ತಗೊಳಿಸಿದ್ದು ಇದೇ ಸಿದ್ದರಾಮಯ್ಯ ಅನ್ನೋದು ಮರೀಬೇಡಿ ಎಂದು ಸಿಎಂ ಸಿದ್ದರಾಮಯ್ಯ ಶಾಸಕ ಜನಾರ್ದನರೆಡ್ಡಿಗೆ ಬಹಿರಂಗವಾಗಿಯೇ ನೇರಾ ನೇರ ಎಚ್ಚರಿಕೆ ನೀಡಿದರು.
ಜಿಲ್ಲೆಯ ಸಂಡೂರಿನ ವಿಠಲಾಪುರದಲ್ಲಿ ಶನಿವಾರ ನಡೆದ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಪರ ಮತಯಾಚಿಸಿ ಮಾತನಾಡಿ
ಪ್ರಚಾರ ಸಭೆಯಲ್ಲಿ, ತಮ್ಮ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಜನಾರ್ದನರೆಡ್ಡಿ ವಿರುದ್ಧ ಹರಿಹಾಯ್ದು ಕೊಂಚ ಖಾರವಾಗಿಯೇ ರೆಡ್ಡಿಗೆ ಪ್ರತಿಕ್ರಿಯೆ ನೀಡಿದರು.
ರೆಡ್ಡಿಯವರೇ, ಕರ್ನಾಟಕ ರಾಜ್ಯ ರಾಜಕಾರಣಕ್ಕೆ ನನ್ನ ಕೊಡುಗೆ ಏನು ? ನಿಮ್ಮ ಕೊಡುಗೆ ಏನು? ನೀವೇನು ಬಳ್ಳಾರಿ ಯಜಮಾನರಾ? ಮತ ಹಾಕುವ ಬಳ್ಳಾರಿಯ ಜನ, ಸಂಡೂರಿನ ಜನ ನಮ್ಮ ಯಜಮಾನರು. ನೆನಪಿರಲಿ. ನಾನು ಗಂಗಾವತಿಗೆ ಪ್ರಚಾರಕ್ಕೆ ಹೋಗಲು ಆಗಲಿಲ್ಲ, ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸರಿಯಾದ ಪ್ರಚಾರ ಮಾಡಲಿಲ್ಲ ಹೀಗಾಗಿ ನೀವು ಅಲ್ಲಿ ಗೆದ್ದಿದ್ದೀರಿ. ನಿಮ್ಮ ಈ ಗೆಲುವು ಶಾಶ್ವತ ಅಲ್ಲ. ಯಾರ ಗೆಲುವೂ ಶಾಶ್ವತ ಅಲ್ಲ. ನೆನಪಿರಲಿ. ನನ್ನ ಬಗ್ಗೆ ಏಕ ವಚನದಲ್ಲಿ ಮಾತನಾಡುವ ಯೋಗ್ಯತೆ ನಿಮಗಿಲ್ಲ ಎಂದು ಮತ್ತೊಮ್ಮೆ ಖಾರವಾಗಿಯೇ ಎಚ್ಚರಿಸಿದರು.