Breaking News

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Spread the love

ಳ್ಳಾರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ‌ಪಾಪದ ಕೊಡ ತುಂಬಿದ್ದು, ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು.

ಜಿಂದಾಲ್ ವಿದ್ಯಾನಗರದಲ್ಲಿ ಭಾನುವಾರ (ನ.10) ಸುದ್ದಿಗೋಷ್ಠಿಯಲ್ಲಿ ‌ಮಾತನಾಡಿದರು.

 

ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳು ಗೆದ್ದಾಗ ಸಿಎಂ ನಿರಾಳವಾಗಿದ್ದರು. ಆದರೆ, ಕಳೆದ ಒಂದೂವರೆ ವರ್ಷದಲ್ಲಿ ಕಾಂಗ್ರೆಸ್ ಹಗರಣಗಳನ್ನು ಬಿಜೆಪಿ ಒಂದೊಂದು ಬಯಲಿಗೆ ಎಳೆಯುತ್ತಿದ್ದಂತೆ ಸಿದ್ದರಾಮಯ್ಯ ಆತಂಕದಲ್ಲಿ ಇದ್ದಾರೆ ಎಂದು ವಾಗ್ದಳಿ ನಡೆಸಿದರು.

ರಾಜ್ಯದಲ್ಲಿ ಅಸಮರ್ಥ ಸಿಎಂಯೊಬ್ಬರು ಆಡಳಿತ‌ ನಡೆಸುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟಾಚಾರ ಮುಕ್ತ ಮಾಡುತ್ತವೆ ಎಂದು ಅಧಿಕಾರದ ಚುಕ್ಕಾಣಿ ಹಿಡಿಯಿತು. ಆದರೆ, ಸಾಲು ಸಾಲು ಹಗರಣಗಳಿಂದ ಒಂದೂವರೆ ವರ್ಷದಲ್ಲಿಯೇ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಹದಿನೈದು ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ಎ1 ಆರೋಪಿಯಾಗಿ ಅಪರಾಧಿ ಸ್ಥಾನದಲ್ಲಿ‌ ನಿಂತಿದ್ದಾರೆ. ಮುಡಾ ಕಮಿಷನರ್ ದಿನೇಶ್ ಎಂಬ ಅಧಿಕಾರಿಯನ್ನು ಸ್ವತಃ ಸಿಎಂ ಬಚ್ಚಿಟ್ಟಿದ್ದಾರೆ ಎಂದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ