Breaking News

ಪಡಿತರ ಚೀಟಿ ರದ್ದು ಆದೇಶ ಹಿಂಪಡೆಯಲು ಗ್ರಾಪಂ ನೌಕರರ ಒತ್ತಾಯ

Spread the love

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ವೃಂದಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೀರು ಗಂಟಿ ಸೇರಿ ಅನೇಕ ಸಿಬ್ಬಂದಿಗೆ ವಿತರಿಸಿದ ಆಹಾರ ಪಡಿತರ ಚೀಟಿ ರದ್ದುಪಡಿಸುವಂತೆ ಹೊರಡಿಸಿದ ಆದೇಶವನ್ನು ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಲಾಗಿದೆ.

 

ಸೊರಬದಲ್ಲಿ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚನ್ನಬಸಪ್ಪ ಈ ಬಗ್ಗೆ ಒತ್ತಾಯಿಸಿದ್ದಾರೆ.

ದಿನದ 10 ಗಂಟೆ ನಾವು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರ ಗೌರವ ಧನವಾಗಿ ದಿನಕ್ಕೆ 500 ರೂಪಾಯಿ ನೀಡುತ್ತಿದೆ. ವರ್ಷಕ್ಕೆ 1.20 ಲಕ್ಷ ರೂಪಾಯಿ ಆದಾಯ ಮೀರಲಿದೆ ಎನ್ನುವ ಕಾರಣಕ್ಕೆ ಪಡಿತರ ಚೀಟಿ ರದ್ದು ಮಾಡಲು ಸರ್ಕಾರ ಆದೇಶ ಹೊರಡಿಸಿರುವುದು ಬಡ ನೌಕರರ ಕುಟುಂಬದ ಮೇಲೆ ಬರೆ ಎಳೆದಂತಾಗಿದೆ ಎಂದು ಹೇಳಿದ್ದಾರೆ.

ದಿನದ ಖರ್ಚು ವೆಚ್ಚಕ್ಕೆ ನೀಡುವ ವೇತನ ಸಾಕಾಗುತ್ತೆ ಹೊರಡಿಸಿದ ಆದೇಶವನ್ನು ಹಿಂಪಡೆಯಬೇಕು. ಬಾಕಿ ಉಳಿಸಿಕೊಂಡಿರುವ ವೇತನವನ್ನು ಸಕಾಲಕ್ಕೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ