Breaking News

ಇಂದು ಬೆಳಗಾವಿಯಲ್ಲಿ ಸೈಕಲ್ ಜಾಥಾ ಸೈಕಲ್ ಓಡಿಸಿ ಅಲೋಕ್ ಕುಮಾರ್ ಅವರಿಗೆ ಸಾಥ್ ನೀಡಿದ ಅಧಿಕಾರಿಗಳು

Spread the love

ಬೆಳಗಾವಿ: ಕೆಎಸ್‍ಆರ್ ಪಿ ಉತ್ಸವದ ಅಂಗವಾಗಿ ಇಂದು ಬೆಳಗಾವಿಯಲ್ಲಿ ಸೈಕಲ್ ಜಾಥಾ ನಡೆಯಿತು. ಹಿರಿಯ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ಸೈಕಲ್ ಓಡಿಸಿ ಎಲ್ಲರ ಗಮನ ಸೆಳೆದರು. ಅನೇಕ ಪೊಲೀಸ್ ಅಧಿಕಾರಿಗಳು ಸೈಕಲ್ ಓಡಿಸಿ ಅಲೋಕ್ ಕುಮಾರ್ ಅವರಿಗೆ ಸಾಥ್ ನೀಡಿದರು.

ಇಂದು ಬೆಳಗ್ಗೆ ಬೆಳಗಾವಿಯ ಸುವರ್ಣ ಸೌಧದಿಂದ ಪ್ರಾರಂಭವಾದ ಸೈಕಲ್ ಜಾಥಾ ಬೆಳಗಾವಿಯ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಎಲ್ಲರ ಗಮನ ಸೆಳೆಯಿತು.
ಸೈಕಲ್ ಜಾಥಾದಲ್ಲಿ ಬೆಳಗಾವಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಕೋಬ್ರಾ, ಐಟಿಬಿಟಿ ಟ್ರೇನಿಂಗ್ ಸೆಂಟರ್ ಅಧಿಕಾರಿಗಳು ಬೆಳಗಾವಿಯ ವಿವಿಧ ಸಂಘ ಸಂಸ್ಥೆಗಳು ಭಾಗವಹಿಸಿದ್ದವು.

ಈ ಸಂದರ್ಭದಲ್ಲಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಕೆಲಸದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಸದೃಢ ಆರೋಗ್ಯಕ್ಕಾಗಿ ನಿತ್ಯ ಸೈಕಲ್ ಉಪಯೋಗಿಸಬೇಕು. ಪ್ರತಿದಿನ ನಾಲ್ಕೈದು ಕಿ.ಮೀ ಸೈಕಲ್ ತುಳಿದರೆ ಆರೋಗ್ಯ ಚನ್ನಾಗಿರುತ್ತದೆ. ಜೊತೆಗೆ ಪರಿಸರ ಮಾಲಿನ್ಯವನ್ನು ತಡೆಯಬಹುದಾಗಿದೆ ಎಂದರು.


Spread the love

About Laxminews 24x7

Check Also

ಯಾದವಾಡದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love *ಅಕ್ರಮ ಸಾರಾಯಿ ಚಟುವಟಿಕೆಯ ಬಗ್ಗೆ ನೀಗಾ ವಹಿಸಿ, ಕಠಿಣ ಕ್ರಮಕ್ಕೆ ಮುಂದಾಗಿ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ