Breaking News

ಬೆಂಗಳೂರಿನ ಶೆಡ್ ನಲ್ಲಿ ‘ಡಬಲ್ ಮರ್ಡರ್’

Spread the love

ಬೆಂಗಳೂರು : ಬೆಂಗಳೂರಿನ ಶೆಡ್ ನಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಸಿಂಗಹಳ್ಳಿ ಗ್ರಾಮದಲ್ಲಿ ಎಸ್.ಆರ್. ಎಸ್ ಟ್ರಾವೆಲ್ಸ್ ಬಸ್ ಗಳನ್ನು ನಿಲ್ಲಿಸುವ ಜಾಗದಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿತ್ತು.

ಕೊಲೆ ಮಾಡಿದ ಆರೋಪಿ ಸುರೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ ಸರ್ವಿಸ್ ಶೆಡ್ ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ನನ್ನು ಬಂಧಿಸಲಾಗಿದ್ದು, ಕೊಲೆ ಹಿಂದಿನ ಕಾರಣ ತಿಳಿದು ಬಂದಿಲ್ಲ.

ಎಸ್.ಆರ್.ಎಸ್ ಟ್ರಾವೆಲ್ಸ್ ಬಸ್ ಗಳಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ನಾಗೇಶ್ (55) ಹಾಗೂ ಮಂಜುನಾಥ್ (50) ಮೃತ ದುರ್ದೈವಿಗಳು.ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಕೊಲೆಯಾಗಿರುವ ಸಾಧ್ಯತೆಯಿದ್ದು. ಬಾಗಲೂರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ