Breaking News

ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಯುವಕ?

Spread the love

ಬೆಳಗಾವಿ: ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ (ನ.11ರಂದು) ಬೆಳಗಿನ ಜಾವ ಯುವಕನೋರ್ವ ಗುಂಡಿನ ದಾಳಿಗೆ ಬಲಿಯಾಗಿದ್ದು ಕೊಲೆಯೋ ಅಥವಾ ಆಕಸ್ಮಿಕ ಸಾವೋ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಹಲಶಿ ಗ್ರಾಮದ ಅಲ್ತಾಫ್ ಮಕಾನದಾರ(30) ಎಂಬ ಯುವಕ ಬಂದೂಕಿನ ಗುಂಡಿಗೆ ಬಲಿಯಾಗಿದ್ದಾನೆ.

ಮೃತದೇಹವನ್ನು ಈತನ ಮನೆಗೆ ತೆಗೆದುಕೊಂಡು ಹೋಗಿರುವುದು ಸಂಶಯಕ್ಕೆ ಕಾರಣವಾಗಿದ್ದು ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಆರಂಭಿಸಿದ್ದಾರೆ.

ಅಲ್ತಾಫ್ ಕೆಲವು ಜನರೊಂದಿಗೆ ಮರಳು ತೆಗೆಯಲು ಹೋಗಿದ್ದನು. ಈ ವೇಳೆ ಅಲ್ತಾಫನಿಗೆ ಗುಂಡು ತಗುಲಿದೆ. ಗುಂಡಿನ ದಾಳಿಗೆ ಅಲ್ತಾಫ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಅಪರಿಚಿತರು ಹಾರಿಸಿದ ಗುಂಡಿಗೆ ಅಲ್ತಾಫ್ ಮೃತಪಟ್ಟಿರಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸರು ವರಿಷ್ಠಾಧಿಕಾರಿ ಶೃತಿ, ರವಿ ನಾಯಕ, ನಂದಗಡ ಸಿಪಿಐ ಎಸ್.ಸಿ. ಪಾಟೀಲ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ