Breaking News

ಪ್ರಜ್ವಲ್‌ ರೇವಣ್ಣಗೆ ‘ಕಂಬಿ’ ಎಣಿಕೆ ಫಿಕ್ಸ್‌

Spread the love

ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಇಡೀ ರಾಜ್ಯ ಅಷ್ಟೇ ಅಲ್ಲದೆ, ದೇಶಾದ್ಯಂತ ಸದ್ದು ಮಾಡಿತ್ತು. ಇನ್ನು ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ನವೆಂಬರ್‌ 11) ಸುಪ್ರೀಂಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

ಈ ಅವರಿಗೆ ಇನ್ಮುಂದೆ ಜೈಲೂಟ ಫಿಕ್ಸ್‌ ಆದಂತಾಗಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇನ್ನು ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದೆ.

ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿತ್ತು. ಈಗಾಗಲೇ ಈ ಮೂರು ಪ್ರಕರಣಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಜಾಮೀನು ಅರ್ಜಿ ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ಸುಪ್ರೀಂಕೋರ್ಟ್ ಕೂಡ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಶಾಕ್‌ ನೀಡಿದೆ.


Spread the love

About Laxminews 24x7

Check Also

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Spread the loveನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ