Breaking News

ಬಿಜಿಎಸ್ ಆಸ್ಪತ್ರೆಯಲ್ಲಿ ಸರ್ಜರಿಗೆ ದರ್ಶನ್ ಗ್ರೀನ್ ಸಿಗ್ನಲ್

Spread the love

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್, ಚಿಕಿತ್ಸೆಗಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊಲೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದರು.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ದರ್ಶನ್ ಗೆ ಚಿಕಿತ್ಸೆಗೆಂದು ಮಧ್ಯಂತರ ಜಾಮೀನು ನೀಡಿದೆ. ಸದ್ಯ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಟ ದರ್ಶನ್ ಗೆ ಫಿಜಿಯೋಥೆರಪಿ ಜೊತೆ ಸರ್ಜರಿ ಅಗತ್ಯವಿದೆ ಎಂದು ವೈದ್ಯರು ರೂಚಿಸಿದ್ದಾರೆ. ಹಿನ್ನೆಲೆಯಲ್ಲಿ ದರ್ಶನ್ ಸರ್ಜರಿಗೆ ಒಪ್ಪಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್ ಗೆ ಸರ್ಜರಿ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಜೊತೆ ವೈದ್ಯರು ಚರ್ಚೆ ನಡೆಸಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿಯೇ ದರ್ಶನ್ ಶೀಘ್ರದಲ್ಲೇ ಸರ್ಜರಿಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ