Breaking News

ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ

Spread the love

ರಾಮನಗರ: ಎಚ್‌.ಡಿ. ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು. ಇದೀಗ ನಾನು 2 ಬಾರಿ ಮುಖ್ಯಮಂತ್ರಿಯಾದೆ ಎಂದು ಅವರಿಗೆ ಹೊಟ್ಟೆಹುರಿ. ನನಗೆ ಸೊಕ್ಕು, ಅಹಂ ಎನ್ನುತ್ತಿದ್ದಾರೆ. ಸರಕಾರವನ್ನು ಕಿತ್ತೂಗೆಯುತ್ತೇನೆ ಎನ್ನುತ್ತಿದ್ದಾರೆ. ದೇವೇಗೌಡರೇ ಇದು ನಿಮ್ಮ ಪಾಳೆಗಾರಿಕೆಯಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್‌.ಡಿ.

ದೇವೇಗೌಡರ ವಿರುದ್ಧ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

ಸೋಮವಾರ ಚನ್ನಪಟ್ಟಣ ಉಪಚುನಾವಣೆಯ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ನಾನು ಮತ್ತು ಜಾಲಪ್ಪ ಇಲ್ಲದೇ ಹೋಗಿದ್ದರೆ 1994ರಲ್ಲಿ ನೀವು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ರಾಷ್ಟ್ರೀಯ ಅಧ್ಯಕ್ಷರಾದ ಎಸ್‌.ಆರ್‌. ಬೊಮ್ಮಾಯಿ ಸಿದ್ಧರಿರಲಿಲ್ಲ. ಏಕೆಂದರೆ ಇವರು ಬೊಮ್ಮಾಯಿ ಸರಕಾರವನ್ನು ಕೆಡವಿದ್ದರು. ಆದರೂ ಆ ಸಂದರ್ಭದಲ್ಲಿ ನಾವೆಲ್ಲಾ ಒಟ್ಟಾಗಿ ದೇವೇಗೌಡರ ಪರ ನಿಂತೆವು. ನೀವು ಸುಳ್ಳು ಹೇಳಬಹುದು. ಆದರೆ ಇತಿಹಾಸವನ್ನು ತಿರುಚಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ವಿರುದ್ಧ ಹರಿಹಾಯ್ದರು.

 


Spread the love

About Laxminews 24x7

Check Also

5, 8,9, 11ನೇ ತರಗತಿ ವಿದ್ಯಾರ್ಥಿಗಳಿಗೆ ಶುಭಸುದ್ದಿ: ಬೋರ್ಡ್‌ ಪರೀಕ್ಷೆ ಇಲ್ಲ!

Spread the love ಬೆಂಗಳೂರು: ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇನ್ನೂ ಇತ್ಯರ್ಥವಾಗದೆ ಇರುವ ಹಿನ್ನೆಲೆಯಲ್ಲಿ 5, 8, 9 ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ