Breaking News

ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆಅಂತವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ

Spread the love

ಚಿಕ್ಕಮಗಳೂರು:ಗ್ರಾಮ ಪಂಚಾಯತ್‌ ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ ಅಂತವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಆನ್‌ಲೈನ್‌ ಸೇರಿದಂತೆ ಯಾವುದೇ ವಿಧದಲ್ಲೂ ಯಾರೂ ಕೂಡ ನಾಮಪತ್ರ ಸಲ್ಲಿಸಬಾರದು ಎಂದು ಖಾಂಡ್ಯ ನಾಗರೀಕ ಹಿತರಕ್ಷಣಾ ವೇದಿಕೆ ಹಾಗೂ ಸರ್ವಜನಿಕರು ಸೂಚಿಸಿದ್ದಾರೆ.ಶತಮಾನಗಳ ಬದುಕೆ ಬೀದಿಗೆ ಬೀಳುವಾಗ ಚುನಾವಣೆ ಬೇಕೇ ಎಂಬ ಪ್ರಶ್ನೆ ಮಲೆನಾಡಿಗರಲ್ಲಿ ಮೂಡಿದೆ. ಈಗಾಗಲೇ ಮಲೆನಾಡಿಗರ ಬದುಕಿನ ಮೇಲೆ ಹುಲಿ ಯೋಜನೆ, ಬಫರ್ ಝೋನ್‌, ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯದ ತೂಗುಗತ್ತಿ ತೂಗುತ್ತಿದೆ. ಸರ್ಕಾರದ ಈ ಯೋಜನೆಗಳಿಂದ ಜಿಲ್ಲೆಯ ಮಲೆನಾಡು ಭಾಗದ ನೂರಾರು ಗ್ರಾಮಗಳೇ ಕಣ್ಮರೆಯಾಗಲಿವೆ. ಈ ಕಾರಣಕ್ಕೆ ಮಲೆನಾಡಿಗರು ಚುನಾವಣಾ ಬಹಿಷ್ಕಾರಕ್ಕೆ ಸಿದ್ಧತೆ ನಡೆಸಿದ್ದಾರೆ.


Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ