Breaking News

BJP;10 ನಾಯಕರಿಂದ ಪ್ರತ್ಯೇಕ ಸಂಘಟನೆ: ರಮೇಶ್‌ ಜಾರಕಿಹೊಳಿ

Spread the love

BJP;10 ನಾಯಕರಿಂದ ಪ್ರತ್ಯೇಕ ಸಂಘಟನೆ: ರಮೇಶ್‌ ಜಾರಕಿಹೊಳಿ

 

ರಾಯಚೂರು: ವಿಜಯೇಂದ್ರ ನಾಯಕತ್ವವನ್ನು ಒಪ್ಪುವುದಿಲ್ಲ. ಬಿಜೆಪಿಯನ್ನು ಬಹುಮತದಿಂದ ಅಧಿಕಾರಕ್ಕೆ ತರಲು ಪ್ರತ್ಯೇಕವಾಗಿ ನಾವು 10 ನಾಯಕರು ಪಕ್ಷ ಸಂಘಟನೆಗೆ ಮುಂದಾಗಿದ್ದೇವೆ. ನಾನು 6 ಜಿಲ್ಲೆಗಳ ಉಸ್ತುವಾರಿ ತೆಗೆದುಕೊಂಡಿ ದ್ದೇನೆ. ಯತ್ನಾಳ್‌, ಪ್ರತಾಪ ಸಿಂಹ, ಅರವಿಂದ ಲಿಂಬಾವಳಿ ಸೇರಿ ಕೆಲವು ನಾಯಕರು ಉಳಿದ ಜಿಲ್ಲೆಗಳ ಹೊಣೆ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದರು.

 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪ ಬಗ್ಗೆ ಗೌರವವಿದೆ. ವಿಜಯೇಂದ್ರ ಇರುವವರೆಗೆ ನಾವು ಯಾವುದೇ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಅವರ ಕಾರ್ಯವೈಖರಿ ಬಗ್ಗೆ ತೃಪ್ತಿ ಇಲ್ಲ. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನೇ ಸುಪ್ರೀಂ ಇದ್ದಂತೆ. ಡಿಸೆಂಬರ್‌ ಒಳಗಾಗಿ ಎಲ್ಲ ಸರಿ ಹೋಗುವ ವಿಶ್ವಾಸವಿದೆ. ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸವಿದ್ದು ಅದೇ ರೀತಿ ಮುನ್ನಡೆಯುತ್ತೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ