ಸಚಿವ ಜಮೀರ್ ಅಹಮದ್ ಬಗ್ಗೆ ಬೇಕಾಬಿಟ್ಟಿ ಮಾತನಾಡಿದ್ದ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಗುನ್ನಾ ಕೊಟ್ಟಿದ್ದಾರೆ. ಜಮೀರ್ ಅಹಮದ್ ಖಾನ್ ಅವರು ಕೇಂದ್ರ ಸಂಸದ ಎಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿದ್ದ ಹೇಳಿಕೆಗೆ ರಿಯಾಕ್ಟ್ ಮಾಡಿದ್ದ ಪುನೀತ್ ಕೆರೆಹಳ್ಳಿ ಅವರು ಬೇಕಾಬಿಟ್ಟಿ ಮಾತನಾಡಿದ್ದರು.
ಈ ಸಂಬಂಧ ವಿಡಿಯೋವೊಂದನ್ನು ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಪುನೀತ್. ಜಮೀರ್ ಅವರ ಬಗ್ಗೆ ಏ ಜಮೀರ್ ಎಂದು ಏಕವಚನದಲ್ಲೇ ಮಾತನಾಡಿದ್ದರು.
ಇದೀಗ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಅವಹೇಳನಕಾರಿ ಮಾತು ಹಾಗೂ ಧರ್ಮ ಮತ್ತು ಜಾತಿ ನಿಂದನೆ ಮಾಡಿದ್ದ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸಚಿವ ಜಮೀರ್ ಅಹಮದ್ ಖಾನ್ ಅವರ ಆಪ್ತ ಸಹಾಯಕ ಬಿ. ಎಸ್. ಅಶೋಕ್ ನೀಡಿದ ದೂರು ಆಧರಿಸಿ ಬುಧವಾರ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಇದರ ಬೆನ್ನಲ್ಲೇ ಬುಧವಾರ ರಾತ್ರೋರಾತ್ರಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿದೆ.