ಚಿಕ್ಕೋಡಿ: ತಾಲ್ಲೂಕಿನ ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿ, ಬೈಕ್, ಡಿಸ್ಕ್ ಸಮೇತ 8 ಟೈರ್ ಸೇರಿದಂತೆ ₹ 37.40 ಲಕ್ಷ ಮೌಲ್ಯದ ಸ್ವತ್ತುಗಳನ್ನು ಚಿಕ್ಕೋಡಿ ಪೊಲೀಸರು ವಶಪಡಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಘಟನೆ ನಡೆದ ಒಂದು ತಿಂಗಳೊಳಗೆ ಆರೋಪಿಗಳನ್ನು ಬಂಧಿಸಿ, ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಚಿಕ್ಕೋಡಿ ಠಾಣೆ ಪಿಎಸ್‍ಐ ಬಸಗೌಡ ನೇರ್ಲಿ ಹಾಗೂ ಸಿಬ್ಬಂದಿಗೆ ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ, ಹೆಚ್ಚುವರಿ ಎಸ್ಪಿ ರಾಮಗೊಂಡ ಬಸರಗಿ, ಚಿಕ್ಕೋಡಿ ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ ಚೌಗುಲೆ ಮಾರ್ಗದರ್ಶನ ನೀಡಿದ್ದರು.
Laxmi News 24×7