Breaking News

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Spread the love

ಮೈಸೂರು: ಮುಡಾ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಚುರುಕುಗೊಳಿಸಿರುವ ಬೆನ್ನಲ್ಲೇ ಕೇಂದ್ರ ಸರಕಾರದ ವಿರುದ್ಧ ತಿರುಗಿ ಬಿದ್ದಿರುವ ಸಿದ್ದರಾಮಯ್ಯ, “ಒಂದು ವೇಳೆ ನನ್ನನ್ನು ಮುಟ್ಟಿದರೆ ರಾಜ್ಯದ ಜನ ನಿಮ್ಮನ್ನು ಸುಮ್ಮನೆ ಬಿಡುವು ದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

 

ತಿ.ನರಸೀಪುರ ವಿಧಾನಸಭಾ ಕ್ಷೇತ್ರದ ಲ್ಲಿನ 470 ಕೋಟಿ ರೂ. ಮೌಲ್ಯದ ಕಾಮಗಾರಿಗಳ ಉದ್ಘಾಟನೆ, ಕಟ್ಟಡಗಳ ಲೋಕಾರ್ಪಣೆ ನೆರವೇರಿಸಿ ಮಾತನಾಡಿದ ಅವರು, ಭಾರೀ ಬಹುಮತದೊಂದಿಗೆ ರಚನೆ ಮಾಡಿರುವ ನಮ್ಮ ಸರಕಾರವನ್ನು ಬಿಜೆಪಿಯವರು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಲೇ ಇದ್ದಾರೆ ಎಂದರು.

ಬಿಜೆಪಿ ಇವತ್ತಿನ ವರೆಗೂ ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿ ಕಾರಕ್ಕೆ ಬಂದಿಲ್ಲ. ಆಪರೇಷನ್‌ ಕಮಲದ ಮೂಲಕ ಮಾತ್ರ ಅಧಿಕಾರಕ್ಕೆ ಬಂದಿದೆ. ಈ ಹಿಂದೆ ನಮ್ಮ 50 ಶಾಸಕರಿಗೆ 50 ಕೋಟಿ ರೂ. ಆಮಿಷ ಒಡ್ಡಿದ್ದರು. ಆದರೆ ನಮ್ಮವರ್ಯಾರೂ ಒಪ್ಪದ ಕಾರಣ ಈಗ ನನ್ನ ಮೇಲೆ ಸುಳ್ಳು ಕೇಸುಗಳನ್ನು ಹಾಕಿಸಿದ್ದಾರೆ. ಇವರಿಗೆ ಎಲ್ಲಿಂದ ಈ ಹಣ ಬರುತ್ತದೆ? ಯಡಿಯೂರಪ್ಪ ಪ್ರಿಂಟ್‌ ಮಾಡಿದ್ರಾ, ಬೊಮ್ಮಾಯಿ ಮಾಡಿದ್ರಾ, ಆರ್‌. ಅಶೋಕ್‌ ಪ್ರಿಂಟ್‌ ಹಾಕಿದ್ನಾ, ವಿಜಯೇಂದ್ರ ಪ್ರಿಂಟ್‌ ಮಾಡಿದ್ನಾ ಎಂದು ಏಕವಚನದಲ್ಲಿ ವಾಗ್ಧಾಳಿ ನಡೆಸಿದರು.

ಬಿಜೆಪಿಯವರು ಇಡಿ, ಸಿಬಿಐ, ಐಟಿ ಹಾಗೂ ರಾಜ್ಯಪಾಲರನ್ನು ದುರುಪ ಯೋಗಪಡಿಸಿಕೊಂಡು ಆಟ ಆಡು ತ್ತಿದ್ದಾರೆ ಎಂದರು. ಅರವಿಂದ ಕೇಜ್ರಿವಾಲ್‌ ಆಯ್ತು, ಈಗ ನನ್ನ ಮತ್ತು ನನ್ನ ಪತ್ನಿಯನ್ನು ಗುರಿ ಮಾಡಿ¨ªಾರೆ. ಬಿಜೆಪಿಯವರ ಆರೋಪ ಸತ್ಯಕ್ಕೆ ದೂರವಾದದ್ದು. ಅವರು ನಮ್ಮ ಜತೆ ಚರ್ಚೆಗೆ ಬರಲಿ. ನಮ್ಮ ತಪ್ಪು ಏನೆಂದು ತೋರಿಸಲಿ. ರಾಜ್ಯದ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರಕಾರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ. ನೀವೂ ಕೂಡ ಸುಖಾ ಸುಮ್ಮನೆ ತಂಟೆಗೆ ಬಂದರೆ ಸುಮ್ಮನಿರಲ್ಲ ಎನ್ನುವ ಎಚ್ಚರಿಕೆ ಕೊಡಬೇಕಿದೆ ಎಂದು ಹೇಳುವ ಮೂಲಕ ಜನರು ನನ್ನ ಬೆಂಬಲಕ್ಕೆ ನಿಲ್ಲಬೇಕು ಎಂದು ಕರೆ ನೀಡಿದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ