Breaking News

ಮುಡಾ’ ಹಗರಣ : ಮಾಜಿ ಅಧ್ಯಕ್ಷ ಮರೀಗೌಡ ‘ED’ ವಿಚಾರಣೆಗೆ ಹಾಜರು!

Spread the love

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ತನಿಖೆಯನ್ನು ಚುರುಕುಗೋಳಿಸಿದ್ದು, ಇದೀಗ ಮಾಜಿ ಅಧ್ಯಕ್ಷ ಮರಿಗೌಡ ಜಾರಿ ನಿರ್ದೇಶನಾಲಯದ (ED) ವಿಚಾರಣೆಗೆ ಹಾಜರಾಗಿದ್ದಾರೆ.

ಹೌದು ಮುಡಾ ಹಗರಣದ ತನಿಖೆ ಯಾವಾಗ ತೀವ್ರ ಸ್ವರೂಪ ಪಡೆದುಕೊಂಡಿತೊ ಆಗ ಮರೀಗೌಡ ಮುಡಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದೀಗ ED ಅಧಿಕಾರಿಗಳು ವಿಚಾರಣೆಗೆ ಕರೆದಿದ್ದರಿಂದ ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಮರೀಗೌಡ ವಿಚಾರಣೆಗೆ ಹಾಜರಾಗಿದ್ದಾರೆ. ಇತ್ತೀಚಿಗಷ್ಟೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ನೀಡಿದ್ದರು.

ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊನ್ನೆ ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಹಾಯಕ ಸಿಟಿ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಅಲ್ಲದೆ ನಿನ್ನೆ ರಾಯಚೂರು ಸಂಸದ ಕುಮಾರ್ ನಾಯಕ್ ಅವರನ್ನು ಕೂಡ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಈ ಹಿಂದೆ ಕುಮಾರನಾಯಕ್ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ಆಗಿದ್ದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ