ಬೆಂಗಳೂರು, ನವೆಂಬರ್ 14: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದ್ದ ಹಗರಣದ ತನಿಖೆಯನ್ನು ಈಗಿನ ಕಾಂಗ್ರೆಸ್ ಸರ್ಕಾರ ನಿವೃತ್ತ ನ್ಯಾಯಮೂರ್ತಿಯ ಮೂಲಕ ನಡೆಸಲು ತೀರ್ಮಾನಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೋವಿಡ್ ಹಗರಣದ ತನಿಖೆಯನ್ನು ಎಸ್ಐಟಿಗೆ ವಹಿಸಲು ಸಂಪುಟ ಅಸ್ತು ಎಂದಿದ್ದು, ಯಡಿಯೂರಪ್ಪ ಹಾಗೂ ಶ್ರೀರಾಮುಲುಗೆ ಎಸ್ ಐ ಟಿ ಸಂಕಷ್ಟ ಎದುರಾಗಿದೆ.
ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಜೊತೆಗೆ ಕಾನೂನು ಸಚಿವ ಎಚ್.ಕೆ ಪಾಟೀಲ ಮಾತನಾಡಿ, ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ತನಿಖಾ ವರದಿಯ ನಂತರ ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಅಧಿಕಾರಿಗಳು ಅಧಿಕಾರಸ್ಥ ರಾಜಕಾರಣಿಗಳ ಅಪವಿತ್ರ ಮೈತ್ರಿಯ ಫಲವಾಗಿ ನಡೆದ ಭ್ರಷ್ಟಾಚಾರ, ಹಗರಣಗಳ ಕುರಿತು ಸತ್ಯಾಂಶಗಳು ಲಭ್ಯವಾಗಿದ್ದವು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.