Breaking News

ರಿಯಲ್ ಎಸ್ಟೇಟ್ ಉದ್ಯಮಿ ದಂಪತಿ ಆತ್ಮಹತ್ಯೆ: 12 ಜನರ ವಿರುದ್ಧ FIR ದಾಖಲು

Spread the love

ಡಿಕೇರಿ: ರಿಯಲ್ ಎಸ್ಟೇಟ್ ಮಾಫಿಯಾದಿಂದ ಮನನೊಂದು ಉದ್ಯಮಿಯೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣದ ಬೈಲಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊಡಗಿನ ಕುಶಾಲನಗರದಲ್ಲಿ ಉದ್ಯಮ ನಡೆಸುತ್ತಿದ್ದ ಕೊಪ್ಪ ನಿವಾಸಿ ಸುರೇಶ್ (40) ಹಾಗೂ ಪತ್ನಿ ಪಲ್ಲವಿ (28) ಆತ್ಮಹತ್ಯೆಗೆ ಶರಣಾದವರು.

ಸುರೇಶ್ ತನ್ನ ಪತ್ನಿಯನ್ನು ಬುಧವಾರ ದೇವಸ್ಥಾನಕ್ಕೆಂದು ಕರೆದೊಯ್ದಿದ್ದರು. ಆದರೆ ಕಾವಲ್ ನ ಜಮೀನಿನ ಹಳೇಯ ಖಾಲಿ ಮನೆಯಲ್ಲಿ ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಿಯಲ್ ಎಸ್ಟೇಟ್ ಮಾಫಿಯಾ ಕಿಇರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಆತ್ಮಹತ್ಯೆಗೂ ಮುನ್ನ ಸುರೇಶ್ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಪ್ರಕರಣ ಸಂಬಂಧ ಪೊಲೀಸರು 12 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ