Breaking News

ಇಂದು ಚಿನ್ನ, ಬೆಳ್ಳಿ ಬೆಲೆ ಭಾರೀ ಇಳಿಕೆ: ಬಂಗಾರ ಖರೀದಿ ಮಾಡುವವರಿಗೆ ಇವತ್ತೇ ಒಳ್ಳೇ ಟೈಮ್

Spread the love

ಬೆಂಗಳೂರು, ನವೆಂಬರ್ 14: ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಕಡಿಮೆಯಾಗಿದ್ದು, ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್ ಸಿಕ್ಕಿದೆ. ಬಂಗಾರದ ದರ ಇಂದು ಭಾರೀ ಇಳಿಕೆ ಕಂಡಿದ್ದು, ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಬಂಗಾರದ ದರ ರೂಪಾಯಿ 69,350 ಆಗಿದ್ದು, ರೂ.1,100 ಇಳಿಕೆಯಾಗಿದೆ.

 

ಚಿನ್ನದ ಬೆಲೆ ಇಂದು (ಗುರುವಾರ) ಗ್ರಾಮ್​ಗೆ 110 ರೂನಷ್ಟು ಕುಸಿತ ಕಂಡಿದೆ. ಅಪರಂಜಿ ಚಿನ್ನದ ಬೆಲೆ 120 ರೂನಷ್ಟು ಇಳಿದಿದೆ. ಕಳೆದ ಹತ್ತು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 435 ರೂನಷ್ಟು ಕುಸಿತ ಕಂಡಿದೆ. ಅಂದರೆ, ಕಿಲೋಗೆ 4 ಲಕ್ಷ ರೂಗೂ ಅಧಿಕ ಮೊತ್ತದಷ್ಟು ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 69,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 75,650 ರುಪಾಯಿ ಆಗಿದೆ.ಹಾಗಾದರೇ ವಿವಿಧ ನಗರದಲ್ಲಿ ನವೆಂಬರ್‌ 14 ರಂದು ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

ನವೆಂಬರ್ 14 ರಂದು ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟು?

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,350 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,650 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,740 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟು?

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,350 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,650 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಎಷ್ಟು?

ಬೆಂಗಳೂರು: 69,350 ರೂ

ಚೆನ್ನೈ: 69,350 ರೂ

ಮುಂಬೈ: 69,350 ರೂ

ದೆಹಲಿ: 69,500 ರೂ

ಕೋಲ್ಕತಾ: 69,350 ರೂ

ಕೇರಳ: 69,350 ರೂ

ಅಹ್ಮದಾಬಾದ್: 69,400 ರೂ

ಜೈಪುರ್: 69,500 ರೂ

ಲಕ್ನೋ: 69,500 ರೂ

ಭುವನೇಶ್ವರ್: 69,350 ರೂ


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ