ಕಲಘಟಗಿ: ಗ್ರಾಮೀಣ ಭಾಗದ ಮೂಲ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪಾ ಟಿ.ಕೆ.ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕಿನ ದೇವಲಿಂಗಕೊಪ್ಪ, ಮುಕ್ಕಲ, ದುಮ್ಮವಾಡ, ಹಿರೇಹೊನ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳ ಆಲಿಸಿ ನರೇಗಾ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ, ಆರೋಗ್ಯ ಕೇಂದ್ರ, ಶಾಲೆಗಳ ಶೌಚಾಲಯ, ಕುಡಿಯುವ ನೀರಿನ ಮೂಲಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲ್ಲೂಕು ಪಂಚಾಯಿತಿ ಇಒ ಪರಶುರಾಮ ಸಾವಂತ ಮಾತನಾಡಿ, ‘ಪ್ರಸಕ್ತ ಸಾಲಿನಲ್ಲಿ ಮಳೆಗೆ ಕೆರೆ ಕಟ್ಟೆಗಳು ಭರ್ತಿಯಾಗಿದ್ದು ಸ್ವಚ್ಛತೆ ಕಾಪಾಡಿಕೊಂಡು ಜನರಿಗೆ ನೀರಿನ ಸಮಸ್ಯೆಯಾಗದಂತೆ ನಿಗಾ ವಹಿಸಬೇಕು’ ಎಂದು ಪಿಡಿಒ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳಿಗೆ ತಿಳಿಸಿದರು.
Laxmi News 24×7