ನರೇಗಲ್: ವಿದ್ಯಾರ್ಥಿಗಳಲ್ಲಿ ನಾಡು, ನುಡಿ, ಸಂಸ್ಕೃತಿ ಹಾಗೂ ಸಾಹಿತ್ಯದ ಬಗ್ಗೆ ಅಭಿರುಚಿ ಮತ್ತು ಚಿಂತನಾಶೀಲ ಮನೋಭಾವ ಬೆಳೆಸಿದರೆ ಕನ್ನಡ ಭಾಷೆಯ ಅಭಿವದ್ಧಿಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದು ಹಿರಿಯ ಸಾಹಿತಿ ವಿ.ಕೆ. ಪಾಟೀಲ ಹೇಳಿದರು.
ಸಮೀಪದ ಜಕ್ಕಲಿ ಗ್ರಾಮದ ಅಂದಾನೆಪ್ಪ ಜ್ಞಾನಪ್ಪ ದೊಡ್ಡಮೇಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ರೋಣ ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ಬುಧವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.
ಕನ್ನಡ ನಾಡು-ನುಡಿ, ಇತಿಹಾಸಕ್ಕೆ ತನ್ನದೇ ಆದ ಪ್ರಾಮುಖ್ಯತೆ ಇದೆ. ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡವೇ ಶ್ರೇಷ್ಠ. ಕನ್ನಡ ನುಡಿಯೇ ಚೆಂದ. ಕನ್ನಡ ಸಂಸ್ಕೃತಿ ಪರಂಪರೆಯೇ ಅಂದ. ಇಂಥ ಮಹೋನ್ನತ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಉಳಿಸಬೇಕಾದ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.
ಕನ್ನಡ ಭಾಷೆಯ ಮೇಲೆ ಎಲ್ಲರೂ ಅಭಿಮಾನ ಬೆಳೆಸಬೇಕು. ಮಾತೃಭಾಷೆಯನ್ನು ಪ್ರೀತಿಸುವ, ಗೌರವಿಸುವ ಮನೋಭಾವ ನಮಗಷ್ಟೇ ಅಲ್ಲ ಮಕ್ಕಳಿಗೂ ಕಲಿಸಿಕೊಡಬೇಕಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಯ ಬೆನ್ನೇರಿ ಹೊರಟಿರುವವರಿಗೆ ಕನ್ನಡ ಭಾಷೆಯ ಬಗ್ಗೆ ತಿಳಿಸಿಕೊಡೋಣ ಎಂದು ಕರೆ ನೀಡಿದರು.
‘ಕನ್ನಡ ನಾಡು ನುಡಿಯ ಹಿರಿಮೆ’ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದ ಹೊಸಳ್ಳಿಯ ಪಿ.ಆರ್. ಹಿರೇಮಠ, ‘ಪ್ರತಿಯೊಬ್ಬರೂ ನಮ್ಮ ಕನ್ನಡ ನಾಡಿನ ಜಲ, ನೆಲದ ಭಾಷೆಯ ಕುರಿತು ಹಾಗೂ ಕನ್ನಡ ಭಾಷೆಯ ಉಳಿವಿಗಾಗಿ ಹೋರಾಟ ಮಾಡಿರುವ ಮಹನೀಯರ ಕುರಿತ ಇತಿಹಾಸ ತಿಳಿದುಕೊಳ್ಳುವುದು ಮುಖ್ಯವಾಗಿದೆ’ ಎಂದರು.
Laxmi News 24×7