Breaking News

ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದ ರಮೇಶ ಜಾರಕಿಹೊಳಿ,ಯತ್ನಾಳ,ಬೆಳಗ್ಗೆ 11.30ಕ್ಕೆ ಪತ್ರಿಕಾಗೋಷ್ಠಿ

Spread the love

ಬೆಂಗಳೂರು : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಮುಖಂಡರು ಶುಕ್ರವಾರ ಪತ್ರಿಕಾಗೋಷ್ಠಿ ಕರೆದಿದ್ದಾರೆ.

ಬೆಳಗ್ಗೆ 11.30ಕ್ಕೆ ಈ ಪತ್ರಿಕಾಗೋಷ್ಠಿ ನಡೆಯಲಿದೆ. ಮಾಜಿ ಸಚಿವರಾದ ರಮೇಶ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ, ಕುಮಾರ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳುವರು.

ಬೆಂಗಳೂರು ಸದಾಶಿವನಗರದಲ್ಲಿರುವ ಕುಮಾರ ಬಂಗಾರಪ್ಪ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಯುವುದು.

ಯಾವುದೇ ಕಾರಣದಿಂದ ವಿಜಯೇಂದ್ರ ನಾಯಕತ್ವವನ್ನು ಒಪ್ಪುವುದಿಲ್ಲ ಎಂದು ಘೋಷಿಸಿರುವ ಈ ನಾಯಕರು ಈಗಾಗಲೆ ಹಲವು ಸುತ್ತಿನ ಸಭೆ ನಡೆಸಿದ್ದಾರೆ. ಆದರೆ ಪಕ್ಷದ ಹೈಕಮಾಂಡ್ ಇವರ ಬೇಡಿಕೆಗೆ ಈವರೆಗೂ ಸೊಪ್ಪು ಹಾಕಿಲ್ಲ. ಈ ಹಿನ್ನೆಲೆಯಲ್ಲಿ ಶುಕ್ರವಾರದ ಪತ್ರಿಕಾಗೋಷ್ಠಿ ಭಾರೀ ಕುತೂಹಲ ಮೂಡಿಸಿದೆ.

ಡಿಸೆಂಬರ್ ಮೊದಲು ವಿಜಯೇಂದ್ರ ಅವರನ್ನು ಅಧ್ಯಕ್ಷಸ್ಥಾನದಿಂದ ಬದಲಾಯಿಸಲಾಗುತ್ತದೆ ಎನ್ನುವ ಹೇಳಿಕೆಯನ್ನು ಈ ನಾಯಕರು ಈಚೆಗಷ್ಟೆ ನೀಡಿದ್ದರು. ಬಹುತೇಕ ಭಿನ್ನಮತೀಯ ನಾಯಕರು ಕಳೆದ ಉಪಚುನಾವಣೆ ಪ್ರಚಾರದಿಂದಲೂ ದೂರ ಉಳಿದಿದ್ದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ