ನವದೆಹಲಿ: ಐಟಿ ನಿಯಮಗಳನ್ನು ಪಾಲಿಸದ ವಾಟ್ಸ್‌ಆಯಪ್‌ಗೆ ನಿಷೇಧ ಹೇರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿ ಹಾಕಿದೆ.
ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಹಾಗೂ ಅರವಿಂದ ಕುಮಾರ್ ಅವರಿದ್ದ ನ್ಯಾಯಪೀಠ ಈ ಬಗ್ಗೆ ತೀರ್ಪು ನೀಡಿದೆ.
ಸರ್ಕಾರ ಹೊರಡಿಸಿರುವ ಐಟಿ ನಿಯಮಗಳನ್ನು ವಾಟ್ಸ್‌ಆಯಪ್ ಪಾಲಿಸುತ್ತಿಲ್ಲ. ಹೀಗಾಗಿ ಅದನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಓಮನ್‌ಕುಟ್ಟನ್ ಕೆ.ಜಿ. ಎಂಬುವವರು ಕೇರಳ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು.
2021ರಲ್ಲಿ ಕೇರಳ ಹೈಕೋರ್ಟ್ ಅದನ್ನು ತಿರಸ್ಕರಿಸಿತ್ತು. ಅಲ್ಲದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು.
Laxmi News 24×7