ಬೆಂಗಳೂರು: ಕೋವಿಡ್-19 ಸೋಂಕಿತರಿಗಾಗಿ ಸರಕಾರದ ವಶಕ್ಕೆ ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಇದುವರೆಗೂ ನೀಡದ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳ ಜತೆ ಸೋಮವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಕಾಲಕ್ಕೆ ಸರಕಾರಕ್ಕೆ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳು ಹಾಸಿಗೆಗಳನ್ನು ಹಸ್ತಾಂತರ ಮಾಡದೇ ಇರುವುದರಿಂದ ಸಮಸ್ಯೆಯಾಗುತ್ತಿದೆ. ಅವರು ನಿರ್ಲಕ್ಷ್ಯ ಧೋರಣೆ ತಾಳುತ್ತಿ
ರಕಾರ ಸೇರಿ ಪ್ರತಿಯೊಬ್ಬರೂ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿರುವಾಗ ಕೆಲವರು ಮಾತ್ರ ಹಾಸಿಗೆಗಳನ್ನು ನೀಡದೇ ಸತಾಯಿಸುತ್ತಿರುವುದು ಸರಿಯಲ್ಲ. ಇವರಿಗೆ ಕಾನೂನಿನ ಬಿಸಿ ಮುಟ್ಟಿಸಬೇಕಾಗಿದೆ ಎಂದ ಅವರು, ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರಹಿತ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ. ಅದರಲ್ಲೂ ಉಸಿರಾಟದ ತೊಂದರೆ, ಮತ್ತಿತರೆ ತುರ್ತು ಸಮಸ್ಯೆಗಳಿರುವ ಹಿರಿಯ ನಾಗರಿಕರಿಗೆ ಅಂಥ ಕಡೆ ಚಿಕಿತ್ಸೆ ಲಭ್ಯವಾಗುತ್ತಿಲ್ಲ ಎಂಬ ಅಂಶವನ್ನು ಡಿಸಿಎಂ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
# ವೈದ್ಯರ ಕೊರತೆ:
ಬೆಂಗಳೂರಿನಂಥ ಮಹಾನಗರದಲ್ಲಿ ವೈದ್ಯರು, ನರ್ಸ್ ಗಳು ಹಾಗೂ ಪೂರಕ ಸಿಬ್ಬಂದಿಯ ಕೊರತೆ ಕಂಡುಬರುತ್ತಿದೆ. ಭಾರೀ ಪ್ರಮಾಣದಲ್ಲಿ ವೈದ್ಯರು ವಾಸ ಮಾಡುತ್ತಿರುವ ಈ ನಗರದಲ್ಲೇ ಈ ಸಮಸ್ಯೆ ಆಗಬಾರದಿತ್ತು.
ದ್ದಾರೆಂದು ದೂರಿದರು.ಕೂಡಲೇ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಬಿಬಿಎಂಪಿ ಇತ್ತ ಗಮನ ಹರಿಸಿ ತುರ್ತು ಕ್ರಮ ಕೈಗೊಂಡರೆ ಅನುಕೂಲವಾಗುತ್ತದೆ. ಇಲ್ಲವಾದರೆ ಸೋಂಕಿತರ ಸಂಖ್ಯೆ ಏಕಾಎಕಿ ಹೆಚ್ಚಾದರೆ ಮುಂದೆ ಸಮಸ್ಯೆಯಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಎಚ್ಚರಿಸಿದರು.
Laxmi News 24×7