Breaking News

ಬೈಲಹೊಂಗಲ | ಬೆಂಕಿ ಅವಘಡ: ಸುಟ್ಟು ಕರಕಲಾದ ಬಣವೆ

Spread the love

ಬೈಲಹೊಂಗಲ: ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಸೋಯಾಬೀನ್ ಕಾಳಿನ ಬಣವೆ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ದೊಡವಾಡ ಗ್ರಾಮದ ಬುಧವಾರ ತಡರಾತ್ರಿ ಸಂಭವಿಸಿದೆ.

ರೈತ ಸಿದ್ದಪ್ಪ ವೀರಭದ್ರಪ್ಪ ಹುದಲಿ ಅವರಿಗೆ ಸೇರಿದ ಬಣವೆಗೆ ಬೆಂಕಿ ಹೊತ್ತಿಕೊಂಡಿದೆ. ಬೈಲಹೊಂಗಲದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದರು.

 

’11 ಎಕರೆಯಲ್ಲಿ ಬೆಳೆದಿದ್ದ ಸೋಯಾಬೀನ್‌ ಕಾಯಿಗಳನ್ನು ಒಂದೆಡೆ ರಾಶಿ ಮಾಡಿ ಇಟ್ಟಿದ್ದೆವು. ಇದರಿಂದ ಸುಮಾರು ₹5 ಲಕ್ಷ ಕೈಗೆಟುಕಬಹುದು ಎಂದು ಅಂದಾಜಿಸಿದ್ದೆವು. ಆದರೆ, ಈಗ ಇಡೀ ಬೆಳೆ ಬೆಂಕಿಗೆ ಆಹುತಿಯಾಗಿದೆ. ವರ್ಷವಿಡೀ ಕಷ್ಟಪಟ್ಟು ದುಡಿದ ಫಸಲು ಕೈಗೆ ಬಾರದಂತಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು’ ಎಂದು ರೈತ ಸಿದ್ದಪ್ಪ ಹುದಲಿ ಒತ್ತಾಯಿಸಿದರು.

ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಬೈಲಹೊಂಗಲ ತಾಲ್ಲೂಕಿನ ದೊಡವಾಡ ಗ್ರಾಮದಲ್ಲಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿರುವ ಸೋಯಾಬಿನ್ ಕಾಯಿ ಬಣವೆ.


Spread the love

About Laxminews 24x7

Check Also

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಭಾಷಣ ಎಂಇಎಸ್ ಮುಖಂಡ ಶುಭಂ ಸೇಳಕೆ ಬಂಧಿಸಿ ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆ ತಂದಿದ್ದಾರೆ.

Spread the loveಬೆಳಗಾವಿ :ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಭಾಷಣ ಮಾಡಿರ ಆರೋಪದ ಮೇಲೆ ಪುಂಡ ಎಂಇಎಸ್ ಮುಖಂಡ ಶುಭಂ ಸೇಳಕೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ