ಆರೋಗ್ಯ ಸಮಸ್ಯೆಯ ಕಾರಣಕ್ಕೆ ಚಿಕಿತ್ಸೆ ಪಡೆಯಲು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿರುವ ನಟ ದರ್ಶನ್‌ಗೆ ಹೊಸ ಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಆರೋಪಿ ಹಾಗೂ ನಟ ದರ್ಶನ್ ಅವರಿಗೆ ಇದೀಗ ಹೊಸ ಸಂಕಷ್ಟ ಸೃಷ್ಟಿಯಾಗಿದೆ. ನಟ ದರ್ಶನ್ ಅವರಿಗೆ ಬೆನ್ನು ನೋವು ಇರುವುದರಿಂದ ಚಿಕಿತ್ಸೆಗೆಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಆರು ವಾರಗಳ ಮಧ್ಯಂತ ಜಾಮೀನನ್ನು ನೀಡಲಾಗಿದೆ. ಅದರಲ್ಲಿ ಈಗಾಗಲೇ ಎರಡು ವಾರಕ್ಕೂ ಹೆಚ್ಚು ಸಮಯ ಆಗಿದೆ. ಇದೀಗ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶವನ್ನು ರದ್ದುಪಡಿಸುವುದಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ತು ಎಂದಿದೆ.
ಅನಾರೋಗ್ಯ ಸಮಸ್ಯೆಯ ಕಾರಣಕ್ಕೆ ಚಿಕಿತ್ಸೆ ಪಡೆಯಲು ಮಧ್ಯಂತರ ಜಾಮೀನಿನ ಮೇಲೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿರುವ ದರ್ಶನ್‌ಗೆ ಇದೀಗ ಮತ್ತೊಂದು ಹಾಗೂ ತೀವ್ರ ಸಂಕಷ್ಟ ಎದುರಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿ ದರ್ಶನ್‌ಗೆ ತೀವ್ರ ಬೆನ್ನು ನೋವಿನ ಸಮಸ್ಯೆ ಇದೆ ಎನ್ನಲಾಗಿದ್ದು. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ದರ್ಶನ್‌ಗೆ ಬಿಗ್ ಶಾಕ್‌ಕೊಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ದರ್ಶನ್ ಅವರು ಮಧ್ಯಂತರ ಜಾಮೀನು ರದ್ದು ಮಾಡಬೇಕು ಎಂದು ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನನ್ನು ರದ್ದು ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಕ್ಕೆ ರಾಜ್ಯ ಸರ್ಕಾರವು ಅನುಮತಿ ನೀಡಿದೆ. ಇದು ದರ್ಶನ್‌ಗೆ ಹೊಸ ಟೆಕ್ಷನ್ ಸೃಷ್ಟಿ ಮಾಡಿದೆ.
Laxmi News 24×7