Breaking News

ಎಸ್‌ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಪ್ರಮುಖ ಆರೋಪಿ ತಹಶೀಲ್ದಾರ್‌ ಕಚೇರಿಗೆ ಹಾಜರು

Spread the love

ಬೆಳಗಾವಿ: ಎಸ್‌ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಹಶೀಲ್ದಾರ್‌ ಬಸವರಾಜ ನಾಗರಾಳ ಶುಕ್ರವಾರ ಕಚೇರಿಗೆ ಬಂದು, ಕೆಲಸಕ್ಕೆ ಹಾಜರಾದರು.

ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ತಹಶೀಲ್ದಾರ್‌ ಬಸವರಾಜ ನಾಗರಾಳ, ಎಫ್‌ಡಿಎ ಅಶೋಕ ಕಬ್ಬಲಿಗೇರ ಹಾಗೂ ಸೋಮು ದೊಡವಾಡಿ ಅವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.

 

‘ಯಾವುದೇ ಸರ್ಕಾರಿ ಅಧಿಕಾರಿ 48 ಗಂಟೆ ಜೈಲು ಸೇರಿದ್ದರೆ ಮಾತ್ರ ಅಮಾನ‌ತು ಮಾಡಲು ಅವಕಾಶವಿದೆ. ಹೀಗಾಗಿ, ತಹಶೀಲ್ದಾರ್‌ ಅಮಾನತು ಆಗಿಲ್ಲ. ಪ್ರಕರಣ ನಡೆದಿರುವುದರಿಂದ ಅವರಿಗೆ ಕೆಲಸ ಮಾಡಲು ಅವಕಾಶ ಕೊಡುವುದಿಲ್ಲ. ರಜೆಯ ಮೇಲೆ ಕಳುಹಿಸಬೇಕೆ ಅಥವಾ ಬೇರೆ ಏನು ಮಾಡಲು ಅವಕಾಶವಿದೆ ಎಂದು ಪರಾಮರ್ಶಿಸಿ ಕ್ರಮ ವಹಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ‘ತಿಳಿಸಿದರು.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ