ಶಿವಮೊಗ್ಗ: ‘ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಕೆಲಸವನ್ನು ಯಾರೂ ಮಾಡುತ್ತಿಲ್ಲ. ಪೂರ್ಣ ಬಹುಮತ ಹೊಂದಿರುವ ಸರ್ಕಾರವನ್ನು ಬೀಳಿಸುವುದು ಹುಚ್ಚುತನದ ಪರಮಾವಧಿ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.
‘ಸರ್ಕಾರ ಬೀಳಿಸುವುದಕ್ಕಾಗಿ ಕಾಂಗ್ರೆಸ್ ಶಾಸಕರನ್ನು ಯಾರೂ ಬಿಜೆಪಿಗೆ ಕರೆಯುತ್ತಿಲ್ಲ’ ಎಂದು ಶನಿವಾರ ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
‘ಕೋವಿಡ್ ಸಂದರ್ಭದಲ್ಲಿ ಜೀವ ಉಳಿಸುವ ಕೆಲಸ ಮಾಡಿದ್ದೇವೆ. ಯಾವುದೇ ಭ್ರಷ್ಟಾಚಾರ ಅಥವಾ ಹಣಕಾಸಿನ ಏರುಪೇರು ಆಗಿಲ್ಲ. ರಾಜ್ಯ ಸರ್ಕಾರ ದುರುದ್ದೇಶದಿಂದ ಎಸ್‌ಐಟಿ ರಚನೆ ಮಾಡಿದೆ. ತನ್ನ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಕೋವಿಡ್ ವಿಚಾರ ಪ್ರಸ್ತಾಪಿಸಿದೆ. ನಾವು ಎಲ್ಲಾ ರೀತಿಯ ತನಿಖೆ ಎದುರಿಸಿ ಆಪಾದನೆಗಳಿಂದ ಮುಕ್ತರಾಗಿ ಹೊರಗೆ ಬರುತ್ತೇವೆ’ ಎಂದು ತಿಳಿಸಿದರು.
‘ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುತ್ತಾರೆ. ವಕ್ಫ್ ವಿಚಾರವಾಗಿ ಬಿಜೆಪಿಯಿಂದ ರಚಿಸಿರುವ ಸಮಿತಿ ರಾಜ್ಯದಲ್ಲಿ ಪ್ರವಾಸ ಮಾಡಿ ವರದಿ ಕೊಡಲಿದೆ’ ಎಂದರು.
Laxmi News 24×7