Breaking News

ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.

Spread the love

ಇತ್ತೀಚೆಗೆ ಕೋವಿಡ್ ಗೆ ಬಲಿಯಾದ ಬೆಳಗಾವಿ ಜಿಲ್ಲೆಯ ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.
 ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಈ ನೆರವು ಮಂಜೂರು ಮಾಡಲಾಗಿದೆ. ಪತ್ರಕರ್ತ ಮಲ್ಲಪ್ಪ ರಾಮದುರ್ಗ  ಅವರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಬೆಳಗಾವಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ರಾಜ್ಯ ಸಂಘದ ಉಪಾಧ್ಯಕ್ಷ ಪುಂಡಲಿಕ ಬಾಳೋಜಿ ಅವರು ರಾಜ್ಯ ಸಂಘಕ್ಕೆ ಮನವಿ ಮಾಡಿದ್ದರು.
ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ 5 ಲಕ್ಷ ರೂ. ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪುಂಡಲೀಕ ಬಾಳೋಜಿ ತಿಳಿಸಿದ್ದಾರೆ.

Spread the love

About Laxminews 24x7

Check Also

ಚಿಕ್ಕೋಡಿ:ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Spread the loveಚಿಕ್ಕೋಡಿ: ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ