Breaking News

ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

Spread the love

ಬೆಳಗಾವಿ: ರಾಜ್ಯ ಮದ್ಯ ಮಾರಾಟಗಾರರು ನ.20 ರಂದು ಕರೆ ನೀಡಿರುವ ರಾಜ್ಯ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಉಮೇಶ್ ಬಾಳಿ ಹೇಳಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ನಮ್ಮ ಪ್ರವಾಸೋದ್ಯಮ ಹೋಟೆಲ್ ಬೇರೆ ಅವರ ಸಂಘಟನೆಯೇ ಬೇರೆ.

ಹೀಗಾಗಿ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದರು.

ಪ್ರವಾಸೋದ್ಯಮ ಹೋಟೆಲ್ ನವರು ಬ್ಯಾಂಕ್ ನಿಂದ ಸಾಲ ಪಡೆದು ಹೆಚ್ಚಿನ ಬಂಡವಾಳ ಹೂಡಿಕೆ ಮಾಡಿ ಹೋಟೆಲ್ ನಡೆಸುತ್ತಿದ್ದೇವೆ. ನಿರುದ್ಯೋಗಿಗಳಿಗೆ ಕೆಲಸ ಕೊಟ್ಟು ವರ್ಷಕ್ಕೆ ಲೈಸನ್ಸ್ ಶುಲ್ಕವನ್ನು ಹೆಚ್ಚಿನ ಪ್ರಮಾಣದಲ್ಲಿ ನೀಡುತ್ತಿದ್ದೇವೆ. ಈ ಶುಲ್ಕವನ್ನು ಸರಕಾರ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ನಾವು ತುಂಬುವ ಜಿಎಸ್ ಟಿ ತೆರಿಗೆ, ವಿದ್ಯುತ್ ಬಿಲ್, ನೀರಿನ ಕರ ಹಾಗೂ ಆಸ್ತಿ ತೆರಿಗೆಯಲ್ಲಿ ರಿಯಾಯಿತಿ ‌ನೀಡಬೇಕು ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ