Breaking News

ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Spread the love

ಬೆಳಗಾವಿ: ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಆರೋಪದಡಿ ತಾಯಿ-ಮಗಳನ್ನು ರಸ್ತೆಗೆ ಎಳೆದು ತಂದು ಬಟ್ಟೆ ಹರಿದು ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ನಗರದ ವಡ್ಡರವಾಡಿ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ಹರಿದಾಡಿದ ಅನಂತರ ಘಟನೆ ಬೆಳಕಿಗೆ ಬಂದಿದ್ದು, ಇಂದ್ರಾ ಅಷ್ಟೇಕರ, ಹೂವಪ್ಪ ಅಷ್ಟೇಕರ ಹಾಗೂ ಮಣಿಕಂಠ ಅಷ್ಟೇಕರ ಅವರ ವಿರುದ್ಧ ಮಾಳಮಾರುತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ವಡ್ಡರವಾಡಿಯ ಮಹಿಳೆಯೊಬ್ಬಳನ್ನು ಮಹಾರಾಷ್ಟ್ರದ ಹುಡುಗನಿಗೆ ಮದುವೆ ಮಾಡಿಕೊಡಲಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದಾರೆಂಬ ಕಾರಣದಿಂದ ಆಕೆ ತವರಿಗೆ ಬಂದು ತನ್ನ ತಾಯಿಯ ಜತೆಗೆ ವಾಸಿಸುತ್ತಿದ್ದಳು. ಆಗ ಅವರ ಪರಿಚಯಸ್ಥರು ಪದೇ ಪದೆ ಮನೆಗೆ ಬಂದು ಹೋಗುತ್ತಿದ್ದರು. ಅದನ್ನು ಕಂಡ ನೆರೆ ಮನೆಯವರು ತಾವು ವೇಶ್ಯಾವಾಟಿಕೆ ನಡೆಸುತ್ತಿದ್ದೇವೆಂಬ ಅನುಮಾನದಿಂದ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ