Breaking News

ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Spread the love

ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಆರ್ಥಿಕವಾಗಿ‌ ದಿವಾಳಿಯಾಗಿದ್ದರಿಂದ ಪಡಿತರ ಚೀಟಿಗಳನ್ನು ಕಡಿತ ಮಾಡುತ್ತಿದ್ದೆ. ದಿಢೀರ್ ಆಗಿ ಯಾಕೆ ಬಿಪಿಎಲ್ ಕಾರ್ಡ್ ಕಡಿತ‌ ಯಾಕೆ ಎಂಬುದು‌ ತಿಳಿಯುತ್ತಿಲ್ಲ‌ ಎಂದು‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬೇಸರ‌ ವ್ಯಕ್ತಪಡಿಸಿದರು.

ರಾಜ್ಯದ ಆಹಾರ ಮತ್ತು‌ ನಾಗರಿಕ‌ ಸಚಿವ ಕೆ.ಎಚ್.ಮುನಿಯಪ್ಪ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ.

ಕೇಂದ್ರ ಸರ್ಕಾರ ಪ್ರತಿಯೊಬ್ಬ ಅರ್ಹ ಪಡಿತರದಾರನಿಗೆ 5 ಕೆ.ಜಿ.ಯಷ್ಟು ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಇಷ್ಟಾದರು ಪಡಿತರ ಚೀಟಿ‌ ಕಡಿತ ಯಾಕೆ ಮಾಡುತ್ತಿದ್ದಾರೆ ಇದರಿಂದ ಬಡವರಿಗೆ ತೊಂದರೆ ಆಗುತ್ತದೆ. ಕನಿಷ್ಠ ಬೆಂಬಲ‌ ಬೆಲೆಯಲ್ಲಿ‌ ಗೋಧಿ, ಭತ್ತ ಇನ್ನಿತರ ಕೃಷಿ ಉತ್ಪನ್ನಗಳನ್ನು ಖರೀದಿಸಲಾಗುತ್ತದೆ. ಮುಂದಾಲೋಚನೆ, ಯೋಜನಾ ಬದ್ದವಿಲ್ಲದ ಗ್ಯಾರಂಟಿಗಳ ಜಾರಿಯೇ ಇದಕ್ಕೆಲ್ಲ‌ ಕಾರಣವಾಗಿದೆ ಎಂದರು.

ಸಿಎಂ‌ ಸಿದ್ದರಾಮಯ್ಯ ನುಡಿದಂತೆ ನಡೆಯುತ್ತೇವೆ ಎನ್ನುತ್ತಾರೆ. ಆದರೆ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ ಎಂದು‌ ಆರೋಪಿಸಿದರು.


Spread the love

About Laxminews 24x7

Check Also

ರಾಹುಲ್‌ ಸದಸ್ಯತ್ವ ರದ್ದುಗೊಳಿಸಿ – ಬಿಜೆಪಿಯಿಂದ ಪ್ರಸ್ತಾಪ ಸಲ್ಲಿಕೆ

Spread the loveನವದೆಹಲಿ: ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದ  ಸಂಬಂಧವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿಪಕ್ಷ ನಾಯಕ ರಾಹುಲ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ