Breaking News

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Spread the love

ವದತ್ತಿ: ತಾಲ್ಲೂಕಿನ ವಟ್ನಾಳ ಗ್ರಾಮದಲ್ಲಿ ಬೆಳಗಾವಿಯ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಾನಸ ಪದವಿ ಪೂರ್ವ ಕಾಲೇಜುಗಳಿಂದ ಜರುಗಿದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಇಲ್ಲಿನ ಜಿ.ಜಿ. ಚೋಪ್ರಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 

ಪೂಜಾ ಕಾಳೆ ಭಾವಗೀತೆ ಮತ್ತು ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ, ಜಾನಪದ ಗೀತೆಯಲ್ಲಿ ದ್ವಿತೀಯ ಸ್ಥಾನ, ಕೀರ್ತಿ ಗಾಣಗೇರ ಆಶು ಭಾಷಣದಲ್ಲಿ ಪ್ರಥಮ, ಮಸಿರಾ ಮಾಂಜರಿ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ಸಂಗಮೇಶ ತಳವಾರ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಈ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಆರ್.ಪಿ. ಕೌಜಲಗಿ, ಉಪನ್ಯಾಸಕರು ಅಭಿನಂದಿಸಿದ್ದಾರೆ.


Spread the love

About Laxminews 24x7

Check Also

ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿ

Spread the loveಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ