Breaking News

ಕರಡಿಗುದ್ದಿ ಗ್ರಾಮದ ಕಾಮಗಾರಿ ಪರಿಶೀಲಿಸಿದ ಹಟ್ಟಿಹೊಳಿ

Spread the love

ಬೆಳಗಾವಿ: ತಾಲ್ಲೂಕಿನ ಕರಡಿಗುದ್ದಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸಾರ್ವಜನಿಕ ಕಲ್ಯಾಣ ಮಂಟಪ ಕಟ್ಟಡ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕಟ್ಟಡವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

 

ಸ್ಥಳೀಯರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಗುತ್ತಿದೆ. ಸ್ಥಳೀಯರ ಸಲಹೆ ಪಡೆದು, ಗುಣಮಟ್ಟದಿಂದ ಕಾಮಗಾರಿ ನಡೆಸಬೇಕು ಎಂದು ಚನ್ನರಾಜ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಂಕರಗೌಡ ಪಾಟೀಲ, ಹಿರೇಬಾಗೇವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ.ಪಾಟೀಲ, ಸುರೇಶ ಇಟಗಿ, ಅಡಿವೇಶ ಇಟಗಿ, ಶ್ರೀಕಾಂತ ಮಾಧು ಭರಮಣ್ಣವರ್, ಗೌಸಮೊದ್ದಿನ್ ಜಾಲಿಕೊಪ್ಪ, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ