ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಸರ್ಕಾರಿ ನೌಕರನ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಇರುವ ಉಳಿಕೆ ಮೊತ್ತದ ಗರಿಷ್ಠ 90% ಅನ್ನು ಮಂಜೂರಿಗೆ ಅವಕಾಶ ನೀಡಲಾಗಿದೆ.
ಈ ಮೂಲಕ ಶೇ.90ರಷ್ಟು GPF ಹಣವನ್ನು ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ಭವಿಷ್ಯ ನಿಧಿಗಳ ಅಧಿನಿಯಮ, 1925 (1925 ರ ಕೇಂದ್ರ ಅಧಿನಿಯಮ XIX) ರ 8 ನೇ ಪ್ರಕರಣವನ್ನು ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990ರ ಕರ್ನಾಟಕ ಅಧಿನಿಯಮ 14)ರ 8 ರೊಂದಿಗೆ ಓದಿಕೊಂಡು ಅದೇ ಅಧಿನಿಯಮದ (3)ನೇ ಪ್ರಕರಣದ (1)ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ 2016 ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಈ ಮುಂದಿನ ಕರಡನ್ನು ರಚಿಸಲು ಉದ್ದೇಶಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ, 1978ರ 3ನೇ ಪ್ರಕರಣದ (2)ನೇ ಉಪ-ಪ್ರಕರಣದ (ಎ) ಖಂಡದ ಮೂಲಕ ಅಗತ್ಯ ಪಡಿಸಿರುವಂತೆ ಅಧಿಸೂಚನೆ ಸಂಖ್ಯೆ: ಆಇ 03 ಮುಭನಿ 2023, ದಿನಾಂಕ:31.07.2024 ಅನ್ನು ದಿನಾಂಕ:7 ನೇ ಆಗಸ್ಟ್, 2024ರ ಅಧಿಕೃತ ರಾಜ್ಯ ಪತ್ರದ ಭಾಗ-IV-A ರಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಆಹ್ವಾನಿಸಿ ಪ್ರಕಟಿಸಲಾಗಿದ್ದುದರಿಂದ;
ಮತ್ತು ಸದರಿ ರಾಜ್ಯ ಪತ್ರವನ್ನು ದಿನಾಂಕ: 7 ನೇ ಆಗಸ್ಟ್ 2024 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ ಯಾವುದೇ ಆಕ್ಷೇಪಣೆಗಳು ಮತ್ತು ಸ್ವೀಕೃತವಾಗಿಲ್ಲದಿರುವುದರಿಂದ ಸಲಹೆಗಳು ಹಾಗೂ ರಾಜ್ಯ ಸರ್ಕಾರದಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14) ರ (3)ನೇ ಪ್ರಕರಣದ (1)ನೇ ಉಪ-ಪ್ರಕರಣವನ್ನು ಅದೇ ಅಧಿನಿಯಮದ ಪ್ರಕರಣ 8 ರೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಭವಿಷ್ಯ ನಿಧಿಗಳ ಅಧಿನಿಯಮ, 1925 (1925 ರ ಕೇಂದ್ರ ಅಧಿನಿಯಮ XIX)ದ 8ನೇ ಪ್ರಕರಣವನ್ನು ಓದಿಕೊಂಡು, ಕರ್ನಾಟಕ ಸರ್ಕಾರವು ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ನಿಯಮಗಳು, 2016 ನ್ನು ಮತ್ತಷ್ಟು ತಿದ್ದುಪಡಿ ಮಾಡಿ ಈ ಮೂಲಕ ಈ ಕೆಳಕಂಡ ನಿಯಮಗಳನ್ನು ರಚಿಸುತ್ತದೆ, ಎಂದರೆ:-