ಬೆಳಗಾವಿ: ಸುಮಾರು 20 ಗುಂಟೆ ಜಾಗಕ್ಕೆ ಸಂಬಂಧಿಸಿದಂತೆ ವಿವಾದ ನಡೆದಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ 15 ಅಧಿಕ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ರವಿವಾರ ರಾತ್ರಿ ಬೆಳಗಾವಿ ತಾಲೂಕಿನ ಯಳ್ಳೂರ ಬಳಿಯ ಸುಳಗಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತ ಅರವಿಂದ ಪಾಟೀಲ ಸೇರಿ ನಾಲ್ವರ ಮೇಲೆ ಹಲ್ಲೆ ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಳ್ಳೂರು ಗ್ರಾಮದಲ್ಲಿರುವ 20 ಗುಂಟೆ ಜಾಗದ ವಿಚಾರವಾಗಿ ಗಲಾಟೆ ನಡೆದಿದೆ. ಅರವಿಂದ ಮತ್ತು ಕೆಲ ಯುವಕರ ನಡುವೆ ವಾಗ್ವಾದ ನಡೆದಿದ್ದು, ಈ ಸಂದರ್ಭದಲ್ಲಿ ಏಕಾಏಕಿ 15 ಜನರ ಗುಂಪು ಮಾರಕಾಸ್ತ್ರ ಸಮೇತ ಆಗಮಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆ ಯತ್ನ ನಡೆದಾಗ ಗ್ರಾಮಸ್ಥರು ಸೇರಿದ್ದಾರೆ. ಆಗ ಆರೋಪಿಗಳು ಬೈಕ್ ಸ್ಥಳದಲ್ಲೇ ಬಿಟ್ಟು ಓಡಿ ಹೋಗಿದ್ದಾರೆ.ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.