Breaking News

ಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Spread the love

ಬೆಂಗಳೂರು: ನ್ಯೂ ತಿಪ್ಪಸಂದ್ರದ ಮುಖ್ಯ ರಸ್ತೆಯಲ್ಲಿರುವ ಲಕ್ಷ್ಮೀ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ 17 ವರ್ಷದ ಯುವಕನನ್ನು ಜೀವನ್‌ ಭೀಮಾನಗರ ಪೊಲೀಸರು ವಶಕ್ಕೆ ಪಡೆದುಕೊಂಡು, ಬಾಲಮಂದಿರಕ್ಕೆ ಕಳುಹಿಸಿದ್ದಾರೆ.

ದೇವರ ವಿಗ್ರಹ ವಿರೂಪಗೊಂಡಿರುವ ಕುರಿತು ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು.

ದೂರು ಆಧರಿಸಿ ತನಿಖೆ ನಡೆಸಿದಾಗ ವಿಗ್ರಹ ವಿರೂಪಗೊಳಿಸಿದ್ದು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಎಂಬುದು ಗೊತ್ತಾಗಿದೆ. ಆತನನ್ನು ಬಾಲನ್ಯಾಯ ಮಂಡಳಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಘಟನಾ ಸ್ಥಳದ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಯುವಕ ಕೃತ್ಯ ಎಸಗಿರುವುದು ಗೊತ್ತಾಗಿದೆ. ಅಲ್ಲದೇ ಮಧ್ಯರಾತ್ರಿ ಒಬ್ಬನೇ ಮನೆಯಿಂದ ಹೊರಬಂದು ಓಡಾಟ ನಡೆಸಿರುವ ದೃಶ್ಯ ಕೆಲವು ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಇನ್ನು ತಿಪ್ಪಸಂದ್ರ ನಿವಾಸಿ ಬಾಲಕ, 3 ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಅನುತ್ತೀರ್ಣ ಗೊಂಡಿದ್ದ. ಅದರಿಂದ ಆಕ್ರೋಶಗೊಂಡು ವಿಗ್ರಹ ವಿರೂಪಗೊಳಿಸಿದ್ದಾನೆ. ಅಲ್ಲದೆ, ಯಾವ ದೇವರು ಇಲ್ಲ ಎಂದು ಫೋಟೋಗಳನ್ನು ಒಡೆದು ಹಾಕಿದ್ದಾನೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ