Breaking News

ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Spread the love

ಮಕನಮರಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದು, ಸೋಮವಾರ (ನ.18) ಬೆಳಿಗ್ಗೆಯಿಂದ ಅವರ ಮೃತದೇಹದ ಹುಡುಕಾಟ ನಡೆದಿದೆ.

 

ಬೆನಕನಹೊಳಿಯ ಲಕ್ಷ್ಮಣ ರಾಮ ಅಂಬಲಿ (49) ಅವರ ಮಕ್ಕಳಾದ ರಮೇಶ (14), ಯಲ್ಲಪ್ಪ(12) ಮೃತರು.

ಲಕ್ಷ್ಮಣ ಹಾಗೂ ಅವರ ಮಕ್ಕಳು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ಸಂಜೆ ಬೈಕ್ ನಿಲ್ಲಿಸಿ, ಮೀನು ಹಿಡಿಯಲು ನದಿ‌ ನೀರಿಗೆ ಇಳಿದಿದ್ದರು. ಆದರೆ, ಸೋಮವಾರ ಬೆಳಿಗ್ಗೆಯವರೆಗೂ ಮನೆಗೆ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈಗ ಎನ್.ಡಿ.ಆರ್.ಎಫ್ ತಂಡದವರು ಹಾಗೂ ಯಮಕನಮರಡಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ