Breaking News

ಕೊಪ್ಪಳದಲ್ಲಿ ಜಿಲ್ಲಾಸ್ಪತ್ರೆಯ ಬಳಿಯೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನರ್ಸಿಂಗ್ ಆಫೀಸರ್!

Spread the love

ಕೊಪ್ಪಳ : ಇತ್ತೀಚಿಗೆ ಸರ್ಕಾರಿ ನೌಕರಸ್ಥರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಕೊಪ್ಪಳದಲ್ಲಿ ಜಿಲ್ಲಾ ಆಸ್ಪತ್ರೆಯ ಮುಂಭಾಗವೇ ನರ್ಸಿಂಗ್ ಆಫೀಸರ್ ಒಬ್ಬರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

 

ಹೌದು ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿ ಈ ಒಂದು ಘಟನೆ ನಡೆದಿದ್ದು, ಸಹೋದ್ಯೋಗಿಗಳು ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕರಿಂದ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದ್ದು, ಇದರಿಂದ ಮನನೊಂದು ನರ್ಸಿಂಗ್ ಆಫೀಸರ್ ಶಶಿ ನಿದ್ರೆ ಮಾತ್ರೆಯನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಇತ್ತೀಚಿಗೆ ಶಶಿ ನೌಕರರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಬಳಿಕ ಸಹೋದ್ಯೋಗಿಗಳು ನಾಮಪತ್ರ ಹಿಂದಕ್ಕೆ ತೆಗೆಸಿದರು. ಚುನಾವಣೆ ವಿಷಯದಲ್ಲಿ ಕೂಡ ಕೆಲವರಿಂದ ಕಿರುಕುಳದ ಆರೋಪ ಕೇಳಿ ಬಂದಿದೆ. ಅಸ್ವಸ್ಥ ನರ್ಸಿಂಗ್ ಆಫೀಸರ್ ಶಶಿ ಚಿಕಿತ್ಸೆ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಸ್ಥಳೀಯರು ಹಾಗೂ ಸಹೋದ್ಯೋಗಿಗಳು ಶಶಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಸದ್ಯ ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ