Breaking News

ಕನ್ನಡ ಪುಸ್ತಕಗಳಿಗೆ ಶೇಕಡ 50ರಷ್ಟು ಭಾರಿ ರಿಯಾಯಿತಿ : CM ಸಿದ್ದರಾಮಯ್ಯ ಘೋಷಣೆ

Spread the love

ಬೆಂಗಳೂರು: ಅಕಾಡೆಮಿಗಳು, ಪ್ರಾಧಿಕಾರದಿಂದ ಪ್ರಕಟಿಸುವ ಪುಸ್ತಕಗಳನ್ನು ಶೇಕಡ 50 ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಾವೇರಿ ಜಿಲ್ಲೆ ಬಂಕಾಪುರದಲ್ಲಿ ಕನಕದಾಸರು ನೆಲೆಸಿದ್ದ ಸ್ಥಳ ಅಭಿವೃದ್ಧಿ ಪಡಿಸಬೇಕು.

ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮಾಡುವುದಕ್ಕೆ ಒಪ್ಪಿಗೆ ನೀಡುವಂತೆ ಸಂಘಟಕರು ವೇದಿಕೆಯಲ್ಲಿ ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಎರಡು ಕಾರ್ಯಕ್ರಮಗಳ ಜಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಮತ್ತು ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಶರಣ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿರುವವರನ್ನು ಪ್ರೋತ್ಸಾಹಿಸುವುದು ಬಹಳ ಮುಖ್ಯ. ಬಸವಾದಿ ಶರಣರ ವಿಚಾರಗಳು ಇಡೀ ಜಗತ್ತಿಗೆ ತಲುಪಬೇಕು. ನಮಗೆ ಮಾತ್ರ ಸೀಮಿತವಾಗಿ ತಲುಪಿದರೆ ಸಾಲುವುದಿಲ್ಲ. ಬಸವಾದಿ ಶರಣರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವವನ್ನು ಸಲ್ಲಿಸಿದಂತಾಗುತ್ತದೆ. ಸಮಾಜಕ್ಕೆ ಬಸವಣ್ಣ ಮತ್ತು ಅವರ ಅನುಯಾಯಿಗಳ ಕೊಡುಗೆ ಅಪಾರವಾದುದು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿಗೆ ಬಂದಾಗ ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದರು. ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆ ಇದೆ. ರಾಜಕೀಯ ಸಮಾನತೆ ಸಿಕ್ಕಿದ್ದರೂ, ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸಿಕ್ಕಿಲ್ಲ. ಬಸವಾದಿ ಶರಣರು ಇದನ್ನು 850 ವರ್ಷಗಳ ಹಿಂದೆಯೇ ಪ್ರತಿಪಾದಿಸಿದ್ದರು.

ಸಮಾನತೆಯ ಸಮಾಜ ನಿರ್ಮಾಣವಾಗಲು ಜಾತಿ ವ್ಯವಸ್ಥೆ ಹೋಗಬೇಕು. ಇಂದಿಗೂ ಜಾತಿ ವ್ಯವಸ್ಥೆ ಇದ್ದು, ಇದನ್ನು ಹೋಗಲಾಡಿಸಲು ಮಾನವೀಯತೆಯಿಂದ ಕೂಡಿದ ಸಮಾಜ ಅಗತ್ಯ. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು. ಕರ್ಮ ಸಿದ್ಧಾಂತ ಇರಬಾರದು. ಇದನ್ನು ಈಗಲೂ ಬಹಳ ಜನ ಪರಿಪಾಲಿಸುತ್ತಾರೆ. ವಿದ್ಯಾವಂತರೂ ಕೂಡ ಹಣೆಬರಹದಲ್ಲಿ ನಂಬಿಕೆ ಇಡುತ್ತಾರೆ. ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಸಮಾಜದಿಂದ ಮಾತ್ರ ಇದಕ್ಕೆ ಪರಿಹಾರ ಸಿಗಲಿದೆ. ನನಗಾಗಲಿ, ಬಸವರಾಜ ಬೊಮ್ಮಾಯಿ ಅವರಿಗಾಗಲಿ ಮುಖ್ಯಮಂತ್ರಿಯಾಗಲಿದ್ದೀರಿ ಎಂದು ಬರೆದಿದ್ದರೆ?

ಗೊತ್ತಿದ್ದೋ, ಗೊತ್ತಿಲ್ಲದೆಯೋ ಮೌಢ್ಯ, ಕಂದಾಚಾರಗಳನ್ನು ಆಚರಿಸುತ್ತೇವೆ. ಇದನ್ನು ಬಿಟ್ಟಾಗ ಮಾತ್ರ ಬಸವಾದಿ ಶರಣರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ. ಬಸವಾದಿ ಶರಣರು ಹೇಳಿದಂತೆ ಇವನಾರವ ಎಂದು ಎಣಿಸದೆ ಇವ ನಮ್ಮವ ಎಂದು ಎಣಿಸಬೇಕು. ವಚನಗಳನ್ನು ಹೇಳುತ್ತಲೇ ನೀವು ಯಾವ ಜಾತಿ ಎಂದು ಕೇಳುತ್ತವೆ. ಇದನ್ನು ಮೊದಲು ನಾವು ಬಿಡಬೇಕು. ಆರ್ಥಿಕ, ಸಾಮಾಜಿಕ ಅಸಮಾನತೆ ಹೋಗಲಾಡಿಸಲು, ಬಸವಾದಿ ಶರಣರ ಕನಸು ನನಸಾಗಿಸಲು ದುಡಿದರೆ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.


Spread the love

About Laxminews 24x7

Check Also

ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು

Spread the love ಹುಕ್ಕೇರಿ : ಗೋಕಾಕ ತಾಲೂಕಿನ ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ