Breaking News

ಕಲ್ಲು ತೂರಾಟ. ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Spread the love

ಹಾರಾಷ್ಟ್ರ: ಅಪರಿಚಿತ ಗುಂಪೊಂದು ಕಲ್ಲು ತೂರಾಟ ನಡೆಸಿದ ಪರಿಣಾಮ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಹಣೆಗೆ ಗಾಯವಾದ ಘಟನೆ ಭಾನುವಾರ(ನ.18) ರಾತ್ರಿ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ.

ದೇಶಮುಖ್ ಅವರನ್ನು ಕೂಡಲೇ ಕಟೋಲ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Maharastra: ಕಾರಿನ ಮೇಲೆ ಕಲ್ಲು ತೂರಾಟ. ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

ಭಾನುವಾರ ರಾತ್ರಿ ಸುಮಾರು ಎಂಟು ಗಂಟೆಯ ಸುಮಾರಿಗೆ ನಾರ್ಖೇಡ್ ಗ್ರಾಮದಲ್ಲಿ ನಡೆದ ಎನ್‌ಸಿಪಿ ನಾಯಕ ಶರದ್‌ಚಂದ್ರ ಪವಾರ್ ಅವರ ಸಭೆಯಲ್ಲಿ ಭಾಗವಹಿಸಿ ಕಟೋಲ್‌ಗೆ ಹಿಂತಿರುಗುತ್ತಿದ್ದಾಗ ಅಪರಿಚಿತರ ಗುಂಪೊಂದು ಕಾರಿನ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.

ಘಟನೆಯಿಂದ ಕಾರಿನ ಗಾಜುಗಳು ಪುಡಿ ಪುಡಿಯಾಗಿದ್ದು ಗಾಜಿನ ಚೂರುಗಳು ಕಾರಿನ ಒಳಗೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡು ಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ