Breaking News

ಶೀಘ್ರ ಕನಕ ಭವನ ನಿರ್ಮಾಣ: ಪ್ರಕಾಶ ಹುಕ್ಕೇರಿ

Spread the love

ಚಿಕ್ಕೋಡಿ: ಹಾಲುಮತ ಸಮಾಜದವರಿಗೆ ಅನುಕೂಲದ ದೃಷ್ಟಿಯಿಂದ ಚಿಕ್ಕೋಡಿ ಪಟ್ಟಣದಲ್ಲಿ ಹೈಟೆಕ್ ಕನಕ ಭವನ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಶೀಘ್ರದಲ್ಲಿ ಕನಕ ಭವನ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಹೇಳಿದರು.

ಚಿಕ್ಕೋಡಿ | ಶೀಘ್ರ ಕನಕ ಭವನ ನಿರ್ಮಾಣ: ಪ್ರಕಾಶ ಹುಕ್ಕೇರಿ

ಪಟ್ಟಣದ ಐಎಂಎ ಸಭಾಭವನದಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡ ಸಂತ ಶ್ರೇಷ್ಠ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಟ್ಟಣದಲ್ಲಿ ಕನಕ ಭವನ, ವಾಲ್ಮೀಕಿ ಭವನ ನಿರ್ಮಾಣದ ಭರವಸೆ ನೀಡಿದಂತೆ ಇದೀಗ ತಲಾ ₹ 2.50 ಕೋಟಿ ವೆಚ್ಚದಲ್ಲಿ ಭವನ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಬಾಗಲಕೋಟೆಯಲ್ಲಿ ಮುಖ್ಯಮಂತ್ರಿಗಳು ಸಹ ಕನಕ ಭವನ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ಉಪನ್ಯಾಸಕ ಎನ್.ಎಸ್.ಕುರಬರ ಮಾತನಾಡಿ, ಮಹಾನ್ ಸಂತ ಕನಕದಾಸರ ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಸಮಾಜ ಬಾಂದವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದರು.

ತಹಶೀಲ್ದಾರ್‌ ಸಿ.ಎಸ್.ಕುಲಕರ್ಣಿ ಮಾತನಾಡಿ, ಕನಕ ಭವನ ನಿರ್ಮಾಣಕ್ಕೆ ಸಮಾಜ ಬಾಂದವರ ಜೊತೆ ಸಭೆ ನಡೆಸಿ ಸೂಕ್ತ ಜಾಗ ನೀಡಲಾಗುತ್ತದೆ ಎಂದರು.


Spread the love

About Laxminews 24x7

Check Also

ಬೆಳಗಾವಿ: ತಾಲ್ಲೂಕಿನ ಹೊನ್ನಿಹಾಳ ಬಳಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ

Spread the love ಬೆಳಗಾವಿ: ತಾಲ್ಲೂಕಿನ ಹೊನ್ನಿಹಾಳ ಬಳಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ ಮಾಡಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ