Breaking News

ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

Spread the love

ವದೆಹಲಿ: ಮಹಾರಾಷ್ಟ್ರದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಜಾರ್ಖಂಡ್‌ ವಿಧಾನಸಭೆಯ ಎರಡನೇ ಹಂತದ 38 ಕ್ಷೇತ್ರಗಳಲ್ಲೂ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ.

ಇತ್ತ ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗೂ ನಾಂದೇಡ್‌ ಲೋಕಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ಆರಂಭಗೊಂಡಿದ್ದು, ಮತದಾರರು ಮತಗಟ್ಟೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ‘ಮಹಾಯುತಿ’ ಹಾಗೂ ವಿಪಕ್ಷ ‘ಮಹಾ ವಿಕಾಸ ಆಘಾಡಿ’ ಮೈತ್ರಿಕೂಟಗಳ ನೇರ ಹಣಾಹಣಿಗೆ ಸಾಕ್ಷಿಯಾಗಿರುವ ವಿಧಾನಸಭಾ ಚುನಾವಣೆ ಅಂತಿಮ ಘಟ್ಟಕ್ಕೆ ತಲುಪಿದೆ.

ನವೆಂಬರ್ 23ರಂದು ಮಹಾರಾಷ್ಟ್ರ, ಜಾರ್ಖಂಡ್ ಮತ್ತು 46 ವಿಧಾನಸಭಾ ಕ್ಷೇತ್ರಗಳ ಮತ್ತು ಎರಡು ಲೋಕಸಭಾ ಸ್ಥಾನಗಳ ಉಪಚುನಾವಣೆಯ ಮತ ಎಣಿಕೆ ನಡೆಯಲಿದೆ.

ತಮ್ಮ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಪ್ರಮುಖ ನಾಯಕರಾದ ನರೇಂದ್ರ ಮೋದಿ, ಅಮಿತ್ ಶಾ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಲವು ರ‍್ಯಾಲಿಗಳಲ್ಲಿ ಭಾಗಿಯಾಗಿ ಮತ ಸೆಳೆಯುವ ಕಸರತ್ತು ನಡೆಸಿದ್ದಾರೆ.

ಮಹಾರಾಷ್ಟ್ರ 288 ಕ್ಷೇತ್ರಗಳ ಪೈಕಿ 75 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಜಾತಿ ಆಧಾರಿತ ಜನಗಣತಿ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ರಕ್ಷಣೆಯಂತಹ ವಿಷಯಗಳನ್ನು ಕಾಂಗ್ರೆಸ್ ಪಾಳಯ ಚುನಾವಣಾ ಅಸ್ತ್ರ ಮಾಡಿಕೊಂಡು ಪ್ರಚಾರ ನಡೆಸಿದೆ.

 

 

 

 


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ