ಬೆಳಗಾವಿರಾಜ್ಯ ಸರಕಾರ ರೈತರ ಜಮೀನು ಕಬಳಿಕೆ ಮಾಡಿ ವಕ್ಫ್ ಬೋಡ್೯ ಎಂದು ನೋಟಿಸ್ ಕೊಡುತ್ತಿರುವುದನ್ನು ಖಂಡಿಸಿ ಡಿಸೆಂಬರ್ ಮೊದಲನೇ ವಾರದಲ್ಲಿ ನಮ್ಮ ಭೂಮಿ ನಮ್ಮ ಹಕ್ಕು ಯೋಜನೆಯಡಿ ಜನಜಾಗೃತಿ ಮೂಡಿಸಲಾಗುವುದು ಎಂದು ಬಿಜೆಪಿ ಮುಖಂಡ ಎಂ.ಬಿ.ಜೀರಲಿ ಹೇಳಿದರು.
ಬುಧವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಮೂರು ತಂಡ ರಚನೆ ಮಾಡಿ ಜನಜಾಗೃತಿ ಮಾಡಲಾಗುತ್ತಿದೆ ಎಂದರು.
ರೈತರ ಜಮೀನುಗಳು ವಕ್ಫ್ ಬೋಡ್೯ ಗೆ ಸೇರಿದ್ದು ಎಂದು ನೋಟಿಸ್ ನೀಡಿರುವ ರಾಜ್ಯ ಸರಕಾರ ಆ ನೋಟಿಸ್ ಹಿಂಪಡೆಯುತ್ತೇವೆ ಎಂದು ಸರಕಾರ ಹೇಳಿದರೂ ಇಲ್ಲಿಯವರೆಗೆ ಸರಿಪಡಿಸುವ ಗೋಜಿಗೆ ಹೋಗದೆ ಇರವುದು ದೊಡ್ಡ ದುರಂತ ಎಂದರು.
ರಾಜ್ಯ ಕಾಂಗ್ರೆಸ್ ಸರಕಾರ ಬಡವರ ಹಾಗೂ ರೈತರ ಜಮೀನನ್ನು ವಕ್ಫ್ ಬೋಡ್೯ಗೆ ಸೇರಿದ್ದು ಎಂದು ನೋಟಿಸ್ ನೀಡಿ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದರು.
22 ರಿಂದ ಮುಂಜಾನೆಯಿಂದ ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿಯ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದರು.
ಚಳಿಗಾಲದ ಅಧಿವೇಶನದಲ್ಲಿ ವಕ್ಪ್ ಆಸ್ತಿಯ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಸಲಾಗುವುದು ಎಂದರು. ರೈತರು ತಮ್ಮ ಜಮೀನಿನ ಪಹಣಿ ಪತ್ರ ಹೊಸದಾಗಿ ತಗೆದು ನೋಡಿ. ಬೇರೆಯವರ ಹೆಸರು ಇದ್ದರೆ ನಮ್ಮ ತಂಡಕ್ಕೆ ತಿಳಿಸಿ ಎಂದರು.
ಮಾಜಿ ಸಿಎಂ ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಹಾಗೂ ರಾಜ್ಯ ನಾಯಕರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಪ್ರತಿ ತಂಡವು ಕನಿಷ್ಠ 8 ರಿಂದ 10 ಜಿಲ್ಲೆಯ ಪ್ರವಾಸ ಮಾಡಲಿದ್ದಾರೆ ಎಂದರು.
ಬೆಳಗಾವಿ ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿಯೂ ವಕ್ಫ್ ಬೋಡ್೯ಗೆ ರೈತರ ಜಮೀನಿಗೆ ನೋಟಿಸ್ ನೀಡಿದ್ದಾರೆ. ಇದನ್ನು ಖಂಡಿಸಿ ನ.22 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೋರಾಟ ನಡೆಸಲಾಗುವುದು ಎಂದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕ ಸಂಜಯ ಪಾಟೀಲ್, ಸಚಿನ ಕಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Laxmi News 24×7