ಸದ್ಯ ಕರ್ನಾಟಕದಲ್ಲಿ ಪಡಿತರ ಚೀಟಿ ಪರಿಷ್ಕರಣೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ತಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದ್ದಕ್ಕೆ ಮತ್ತು ಬಿಪಿಎಲ್ ಇದ್ದಿದ್ದನ್ನು ಎಪಿಎಲ್ಗೆ ಸೇರಿಸಿದ್ದಕ್ಕೆ ಜನರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಪಡಿತರ ಚೀಟಿ ಪರಿಷ್ಕರಣೆ ವಿಚಾರವಾಗಿ ಎದ್ದಿರುವ ಗೊಂದಲಗಳಿಗೆ ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು 1,50,59,431 ಕಾರ್ಡ್ಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸದ್ಯ 1,02,509 ಕಾರ್ಡ್ಗಳನ್ನು ಪರಿಷ್ಕರಣೆ ಮಾಡಿದ್ದೇವೆ. ಉಳಿದ ಎಲ್ಲ ಬಿಪಿಎಲ್ ಕಾರ್ಡ್ಗಳನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
, ಮಾನದಂಡಗಳ ಅನ್ವಯ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಪರಿಷ್ಕರಿಸಲಾಗಿದೆ. ಅನರ್ಹ ಎಂಬ ಕಾರ್ಡ್ಗಳನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿ ಇಡಲಾಗಿದೆ. ಬಿಪಿಎಲ್ಗೆ ಅನರ್ಹರು ಎಂದು ಕಂಡು ಬಂದಿರುವ ಕಾರ್ಡ್ಗಳನ್ನು ಎಪಿಎಲ್ಗೆ ಸೇರಿಸಲಾಗಿದೆ. ಬಿಪಿಎಲ್ಗೆ ಅರ್ಹರಿದ್ದೂ ಕೂಡ ಎಪಿಎಲ್ಗೆ ಸೇರಿಸಿದ್ದರೇ ಅಂಥವರಿಗೆ ಮರು ಹಂಚಿಕೆ ಮಾಡುತ್ತೇವೆ ಎಂದರು.
ಬಿಪಿಎಲ್ಗೆ ಅರ್ಹರಿದ್ದವರ ಕಾರ್ಡ್ ರದ್ದಾಗಿದ್ದರೆ ಒಂದು ವಾರ ಕಾಲಾವಕಾಶ ನೀಡಿ, ಮರು ನೋಂದಣಿ ಮಾಡಿಕೊಂಡು ಕಾರ್ಡ್ ಮರುಹಂಚಿಕೆ ಮಾಡುತ್ತೇವೆ ಎಂದು ತಿಳಿಸಿದರು.ಬಿಪಿಎಲ್ ಕಾರ್ಡ್ದಾರರನ್ನು ಎಪಿಎಲ್ಗೆ ಸೇರ್ಪಡೆ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಇದರಲ್ಲಿ ಅಧಿಕಾರಿಗಳ ತಪ್ಪಿಲ್ಲ, ಎಲ್ಲ ಗೊಂದಲದ ಹೊಣೆ ನಾನೇ ಹೊರುವೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡುವೆ. ಯಾವುದೇ ಅರ್ಹ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಿಲ್ಲ ಎಂದು ಭರವಸೆ ನೀಡಿದರು.