Breaking News

ನಿರ್ಮಲಾ ಸೀತಾರಾಮನ್‌ ಭೇಟಿ ಮಾಡಿದ ಸಿಎಂ

Spread the love

ನಿರ್ಮಲಾ ಸೀತಾರಾಮನ್‌ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸುವಂತೆ ಮನವಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, 2024-25ರ ಆರ್ಥಿಕ ವರ್ಷದಲ್ಲಿ ಅಲ್ಪಾವಧಿ ಕೃಷಿ ಸಾಲಗಳ (ಎಸ್‌ಎಒ) ಮಿತಿಯನ್ನು ಹೆಚ್ಚಿಸುವಂತೆ ಒತ್ತಾಯಿಸಿದರು.

ನಬಾರ್ಡ್‌ನ ಕೃಷಿ ಸಾಲವನ್ನು ಶೇ.58 ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ, ಹಾಗಾಗಿ ಈ ಸಾಲದ ಮಿತಿಯನ್ನು ಹೆಚ್ಚಿಸಿ ರೈತರ ಹಿತಕಾಯುವಂತೆ ಮನವಿ ಮಾಡಿದ್ದಾರೆ, ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

ಈ ಮೊದಲು ದೆಹಲಿ ಭೇಟಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ, ‘ನಬಾರ್ಡ್‌ ಕಳೆದ ವರ್ಷ ರಾಜ್ಯಕ್ಕೆ ₹5,600 ಕೋಟಿ ಸಾಲ ನೀಡಿತ್ತು. ಈ ವರ್ಷ 2,340 ಕೋಟಿಗೆ ಕಡಿತ ಮಾಡಿದೆ. ಈ ಬಗ್ಗೆ ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು’ ಎಂದಿದ್ದರು. 2024-25ರಲ್ಲಿ 35 ಲಕ್ಷ ರೈತರಿಗೆ 25,000 ಕೋಟಿ ರೂಪಾಯಿಗಳ ಅಲ್ಪಾವಧಿಯ ಕೃಷಿ ಸಾಲವನ್ನು ವಿತರಿಸುವ ಗುರಿಯನ್ನು ಕರ್ನಾಟಕ ಹೊಂದಿದೆ ಎಂದು ಒತ್ತಿ ಹೇಳಿದರು. 2023-24ರಲ್ಲಿ ರಾಜ್ಯವು ಸಹಕಾರಿ ಸಾಲ ರಚನೆಯ ಮೂಲಕ ಈಗಾಗಲೇ 22,902 ಕೋಟಿ ರೂ. ಸಾಲ ನೀಡಿದೆ


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ