ಸಿಎಂ ಸಿದ್ದರಾಮಯ್ಯ ತಮ್ಮ ಕೊನೆಯ ದಿನಗಳನ್ನು ಎನಿಸುತ್ತಿದ್ದಾರೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನ ಅವರ ಕೊನೆಯ ಅಧಿವೇಶನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭವಿಷ್ಯ ನುಡಿದರು.
ಅವರು ದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಸಭೆಯ ಕುರಿತು ಬಳ್ಳಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಬೆಳಗಾವಿಗೆ ಆಗಮಿಸಿ ಇಲ್ಲಿನ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಈ ರಾಜ್ಯದ ರೈತರನ್ನ ಹಾಗೂ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಉತ್ತರ ಕರ್ನಾಟಕಕ್ಕೂ ಹಾಗೂ ಕಿತ್ತೂರು ಕರ್ನಾಟಕಕ್ಕೂ ರಾಜ್ಯ ಸರ್ಕಾರದ ಸಂಬಂಧವಿಲ್ಲದಂತಾಗಿದೆ. ಅಭಿವೃದ್ಧಿ ಕೈಗೊಳ್ಳದ ಈ ಸರ್ಕಾರದ ಶಾಸಕರೇ ತಾವು ಶಾಸಕರಾಗಿದ್ದು ದುರ್ದೈವದ ಸಂಗತಿ ಎನ್ನುತ್ತಿದ್ದಾರೆ. ಎಂದೆಂದೂ ಇಂತಹ ಪರಿಸ್ಥಿತಿ ನಿರ್ಮಾಣವಾಗಿರಲಿಲ್ಲ ಮುಖ್ಯಮಂತ್ರಿಗಳನ್ನ ನೋಡಿದ್ರೆ ಅಯ್ಯೋ ಎನಿಸುತ್ತಿದೆ. ಹಣಕಾಸಿನ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ಸಂಪೂರ್ಣವಾಗಿ ಸೋತಿದ್ದು, ಶಾಸಕರಿಗೂ ಅನುದಾನ ನೀಡಲು ಹಣವಿಲ್ಲದಂತಾಗಿದೆ. ಶಾಸಕರು ಅಸಹಾಯಕರಾಗಿದ್ದಾರೆ ಎಂದರು.
ವಕ್ಫ್ ವಿಚಾರದಲ್ಲಿ ರಾಜ್ಯ ಸರ್ಕಾರ ರೈತರನ್ನ ಆತಂಕಕ್ಕೆ ದೂಡಿದೆ. ಇನ್ನೊಂದೆಡೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದೆ. ಆದ್ದರಿಂದ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು. ಬಿಜೆಪಿ ಹಾಗೂ ಜೆಡಿಎಸ್ ರಾಜ್ಯ ಸರ್ಕಾರವನ್ನು ಸರಿದಾರಿಗೆ ತರಲು ತಂತ್ರಗಾರಿಕೆ ನಡೆಸಿದೆ ಎಂದರು.
Laxmi News 24×7