Breaking News

ಕೆಲಸ ಮುಗಿಸಿ ವಾಪಸ್ ಆಗುವಾಗ ಅಪಘಾತ: ಇಬ್ಬರು ಸಾವು

Spread the love

ಬೆಳಗಾವಿ: ಕ್ರೂಸರ್ ಮರಕ್ಕೆ ಡಿಕ್ಕಿಯಾಗಿ ಬಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 16 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ರಾಮದುರ್ಗ ತಾಲೂಕಿನ ಚುಂಚುನೂರು ಗ್ರಾಮದ 18 ಜನರು ಪಕ್ಕದ ಗ್ರಾಮಕ್ಕೆ ಹತ್ತಿ ಬಿಡಿಸಿ ವಾಪಸ್ ಆಗುವ ವೇಳೆ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ನೇರವಾಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನ ಪಲ್ಟಿಯಾಗಿದೆ.

ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಕೆಂಚಪ್ಪ ಲಕ್ಷ್ಮಣ ಈರನ್ನವರ (60) ಸ್ಥಳದಲ್ಲೇ ಮೃತಪಟ್ಟರೆ 16 ವರ್ಷದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಅಪಘಾತದ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣ ಜಖಂ ಆಗಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ