ಬೆಂಗಳೂರು, (ನವೆಂಬರ್ 22): ಏನು ಅರಿಯದ ಈ ಮುದ್ದು ಮಕ್ಕಳು ತನ್ನ ತಾಯಿ ಕೈನಿಂದಲೇ ಕೊಲೆಯಾಗಿದ್ದಾರೆ ಎನ್ನುವುದನ್ನ ನಂಬಲಸಾಧ್ಯವಾದರು ನಂಬಲೇಬೇಕು..ಮಕ್ಕಳ ಬದುಕು ರೂಪಿಸಬೇಕಾದ ಹೆತ್ತಮ್ಮನೇ ಮಕ್ಕಳ ಜೀವನವನ್ನೇ ಮುಗಿಸಿಬಿಟ್ಟಿದ್ದಾಳೆ. ಹೌದು… ಮಹಿಳೆಯೊಬ್ಬರು ತನ್ನಿಬ್ಬರು ಮುದ್ದಾದ ಮಕ್ಕಳನ್ನು ಕೈಯಾರೆ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹಗ್ಗದಿಂದ ಕುತ್ತಿಗೆಗೆ ಬಿಗಿದು ಶಂಭು(7), ಶಿಯಾ ಳನ್ನ (3) ಕೊಲೆ ಮಾಡಿದ್ದಾಳೆ. ಬಳಿಕ ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದ್ರೆ, ಸರಿಯಾದ ಸಮಯಕ್ಕೆ ಗಂಡ ಬಂದು ಕಾಪಾಡಿದ್ದಾನೆ.ಜಾರ್ಖಾಂಡ್ ಮೂಲದ ಸುನಿಲ್ ಸಾಹು ಹಾಗೂ ಮಮತಾ ಸಾಹು ದಂಪತಿ ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಮಾಡಿಕೊಂಡಿದ್ದರು.
ಸುನಿಲ್ ಸಾಹು ಆಟೋ ಓಡಿಸಿಕೊಂಡಿದ್ರೆ ಮಮತಾ ಗೃಹಿಣಿಯಾಗಿದ್ದಳು. ಹೀಗಿರಬೇಕಾದ್ರೆ ಪತ್ನಿಗೆ ಪತಿ ಮೇಲೆ ಅನುಮಾನ. ಜಾರ್ಖಾಂಡ್ ಮೂಲದ ಮಹಿಳೆ ಜೊತೆಗೆ ಫೋನಲ್ಲಿ ಮಾತಾಡ್ತಾನೆ ಅನ್ನೋ ಸಂಶಯ ಇತ್ತು..ಇದೇ ಕಾರಣಕ್ಕೆ ಇಬ್ಬರ ಮಧ್ಯೆ ಆಗಾಗ ಗಲಾಟೆ ನಡೀತಿತ್ತು..ಅದರಂತೆ ನವಂಬರ್ 21 ರ ಸಂಜೆ ಕೂಡ ಗಲಾಟೆ ಆಗಿದೆ…