Breaking News

ಶಿಗ್ಗಾಂವಿ ಫಲಿತಾಂಶ, ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು; ಮುಗ್ಗರಿಸಿದ ಭರತ್ 13,448 ಮತಗಳ ಅಂತರದ ಗೆಲುವು

Spread the love

ಹಾವೇರಿ, ನವೆಂಬರ್ 23: ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ.

ಅಜ್ಜಂಪೀರ್ ಖಾದ್ರಿ ಅವರ ಬಂಡಾಯ ಕಾಂಗ್ರೆಸ್​ಗೆ ಆರಂಭದಲ್ಲಿ ತುಸು ಹಿನ್ನಡೆ ತಂದಿತ್ತು. ಆದರೆ ಅದನ್ನು ಶಮನಗೊಳಿಸಿ ಚುನಾವಣೆಯಲ್ಲಿ ಯಶಸ್ಸು ಕಾಣುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಮತ್ತೊಂದೆಡೆ, ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಇಡೀ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುಗ್ಗರಿಸಿತ್ತು. ಆದರೆ, ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ್ದರು. ಈಗ ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರದಲ್ಲಿ ಅವರ ಪುತ್ರ ಭರತ್ ಅಭ್ಯರ್ಥಿಯಾಗಿದ್ದರಿಂದ ಸಹಜವಾಗಿಯೇ ಬೈ–ಎಲೆಕ್ಷನ್ ರಿಸಲ್ಟ್​ ಕಡೆ ಹೆಚ್ಚು ಗಮನ ಇತ್ತು.

13,448 ಮತಗಳ ಅಂತರದ ಗೆಲುವು

ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಯಾಸೀರ್​ ಪಠಾಣ್​ಗೆ 13,448 ಮತಗಳ ಅಂತರದಲ್ಲಿ ಗೆಲುವು ದೊರೆತಿದೆ. ಅವರಿಗೆ 1,00,587 ಮತಗಳು ದೊರೆತಿದ್ದರೆ, ಶಿಗ್ಗಾಂವಿ ಬಿಜೆಪಿ​ ಅಭ್ಯರ್ಥಿ ಭರತ್​ ಬೊಮ್ಮಾಯಿಗೆ 86,960 ಮತಗಳು ದೊರೆತಿವೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ