ನವೆಂಬರ್ 23: ಉಪ ಚುನಾವಣೆ ಫಲಿತಾಂಶ (Karnataka By Poll Result) 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿದ್ದಾರೆ. ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಸಮೀಕ್ಷೆಗಳು ಸುಳ್ಳಾಗುತ್ತವೆ ಅಂತ ನಾನು ನಿನ್ನೆ ಸಂಜೆಯೇ ಹೇಳಿದ್ದೆ. ನಾವು ಮಾಡುವ ಸಮೀಕ್ಷೆಯೇ ಬೇರೆ ಅಂತ ಹೇಳಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನ ಕೆಪಿಸಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್ಡಿ ಕುಮಾರಸ್ವಾಮಿ ಅವರು ಹೆಚ್ಡಿಕೆ ಮಂಡ್ಯ ಕ್ಷೇತ್ರದ ಸಂಸದರಾಗಿದ್ದಾರೆ. ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಆ ಕ್ಷೇತ್ರದಲ್ಲಿ ಬಿಟ್ಟು ಹೋದ ಕುರುಹುಗಳಿಗೆ ಜನ ಉತ್ತರ ನೀಡಿದ್ದಾರೆ. ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಲ್ಲೂ ನಾವು ಗೆದ್ದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.
ಶಿಗ್ಗಾಂವಿಯಲ್ಲಿ ಭರತ್ ಸೋಲು ಅನ್ನೋದು ಹೇಳಲ್ಲ. ಅಲ್ಲಿ ಈ ಹಿಂದೆ ನಮ್ಮ ಅಭ್ಯರ್ಥಿ ಸೋತಿದ್ದರು. ಈಗ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಸಂಡೂರಲ್ಲಿನಲ್ಲೂ ನಾವು ಗೆದ್ದಿದ್ದೇವೆ. ಈ ಮೂರು ಚುನಾವಣೆ ನಮ್ಮ ಗ್ಯಾರಂಟಿ ಮತ್ತು ಅಭಿವೃದ್ಧಿಗೆ ಕೈಗನ್ನಡಿಯಾಗಿದೆ ಎಂದು ಹೇಳಿದರು.